ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತಕ್ಕೆ ಎಂಟರ ಗಂಟು, ಟಿ20 ಸರಣಿ ಸಮಬಲ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಭಾರತಕ್ಕೆ ಎಂಟರ ಗಂಟು, ಟಿ20 ಸರಣಿ ಸಮಬಲ

ಮಳೆಯಿಂದಾಗಿ ತಲಾ 8 ಓವರ್ ಗಳಿಗೆ ಸೀಮಿತವಾಗಿದ್ದ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ತಮ್ಮನ್ನು ತಾವು ಸೀಮಿತಗೊಳಿಸಿಕೊಳ್ಳದೆ ಅಬ್ಬರದ ಆಟವಾಡಿದರು. ಅವರಿಗೆ ಸ್ಪಿನ್ನರ್ ಅಕ್ಸರ್ ಪಟೇಲ್, ಜಸ್ಪೀತ್ ಬುಮ್ರಾ ಮತ್ತು ಎರಡೇ ಬಾಲ್ ಆಡಿದರೂ ನಾಲ್ಕು ಜನ ಮೆಚ್ಚುವಂಥ ಆಟವಾಡಿದ ದಿನೇಶ್ ಕಾರ್ತಿಕ್ ಬೆಂಬಲ ನೀಡಿದರು. ಇದರ ಫಲವಾಗಿ ಭಾರತ ಎರಡನೇ ಟಿ 20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿ ಸರಣಿಯನ್ನು 1-1ರಿಂದ ಸಮಬಲಗೊಳಿಸಿತು.

ನಾಗ್ಪುರದಲ್ಲಿ ಮಳೆ ಬಂದು ಔಟ್ ಫೀಲ್ಡ್ ಒದ್ದೆಯಾದ ಕಾರಣ ಪಂದ್ಯ ತಡವಾಗಿ ಆರಂಭಗೊಂಡಿತು. ಅಷ್ಟು ಹೊತ್ತಿಗೆ ಸಾಕಷ್ಟು ಸಮಯ ಕಳೆದುಕೊಂಡಿದ್ದರಿಂದ ಎರಡೂ ತಂಡಗಳಿಗೆ ಕೇವಲ ಎಂಟು ಓವರ್  ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು.

ಟಾಸ್ ಗೆದ್ದು ಆಸ್ಟ್ರೇಲಿಯಾಗೆ ಬ್ಯಾಟಿಂಗ್ ಕೊಟ್ಟ ಭಾರತಕ್ಕೆ ಸ್ಪಿನ್ನರ್ ಅಕ್ಸರ್ ಪಟೇಲ್ ಮತ್ತು ಬುಮ್ರಾ ಆಸರೆಯಾದರು. ಆದರೆ ಕೊನೆಯ ಓವರ್ ನಲ್ಲಿ ಹರ್ಷಲ್ ಪಟೇಲ್ ದುಬಾರಿಯಾದ ಕಾರಣ ಮತ್ತು ಮ್ಯಾಥ್ಯೂ ವೇಡ್ ಅವರ ಕೆಚ್ಚಿನ ಆಟದ ಕಾರಣ, ಆಸ್ಟ್ರೇಲಿಯಾ ಭಾರತಕ್ಕೆ ಗೆಲ್ಲಲು 91 ರನ್ ಗಳ ಗುರಿ ನೀಡಿತು. ಅಬ್ಬರದಿಂದಲೇ ಬ್ಯಾಟಿಂಗ್ ಶುರು ಮಾಡಿದ ನಾಯಕ ರೋಹಿತ್ ಮತ್ತು ರಾಹುಲ್ ಮೊದಲನೇ ಓವರ್ ನಲ್ಲೇ 20 ರನ್ ದೋಚಿದರು. 3 ಓವರ್ ಮುಗಿದಿದ್ದರೂ ಭಾರತ ತಂಡ ಒಂದೂ ಬೌಂಡರಿ ಗಳಿಸಿರಲಿಲ್ಲ, ಆದರೆ ಬದಲಾಗಿ 5 ಭರ್ಜರಿ ಸಿಕ್ಸರ್ ಸಿಡಿಸಿತ್ತು.  ಇನ್ನೊಂದು ಕಡೆ ವಿಕೆಟ್ ಬೀಳುತ್ತಿದ್ದರೂ ನಾಯಕ ರೋಹಿತ್ ಕೊನೆಯವರೆಗೂ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.

ರಾಹುಲ್ , ಕೊಹ್ಲಿ, ಸೂರ್ಯಕುಮಾರ್ ಯಾದವ್, ಪಾಂಡ್ಯ ವಿಫಲರಾದರೂ ಕೊನೆಯಲ್ಲಿ ಡಿಕೆ ಅಬ್ಬರದ ಸಣ್ಣ ಝಲಕ್ ಪ್ರೇಕ್ಷಕರಿಗೆ ಸಿಕ್ಕಿತು. ಕೊನೆಯ ಓವರ್ ನಲ್ಲಿ 9 ರನ್ ಗಳ ಅವಶ್ಯಕತೆ ಇದ್ದಾಗ,  ಡಿಕೆ ಗೆ ಬ್ಯಾಟಿಂಗ್ ಅವಕಾಶ ಸಿಕ್ಕಿತು. ಆದರೆ, ಹೆಚ್ಚಿನ ಲೆಕ್ಕಾಚಾರಕ್ಕೆ ಆಸ್ಪದ ಕೊಡದೇ ಡಿಕೆ, ಮೊದಲ ಬಾಲನ್ನು ಸಿಕ್ಸರ್ ಗೆ ಅಟ್ಟಿ, ಎರಡನೇ ಬಾಲ್ ನಲ್ಲಿ ಬೌಂಡರಿ ಬಾರಿಸಿ ಎರಡೇ ಬಾಲಿನಲ್ಲಿ ಪಂದ್ಯ ಮುಗಿಸಿ ತಮ್ಮ ಫಿನಿಷರ್ ಪಟ್ಟವನ್ನು ಹೈಲೈಟ್ ಮಾಡಿದರು. ಉತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ರೋಹಿತ್ ಶರ್ಮಾ ಪಂದ್ಯ ಪುರುಷ ಪ್ರಶಸ್ತಿ ಪಡೆದರು. ಸರಣಿಯ ಕಟ್ಟ ಕಡೆಯ ಮತ್ತು ನಿರ್ಣಾಯಕ ಫೈನಲ್ ಪಂದ್ಯ ಸೆಪ್ಟೆಂಬರ್ 25ರ ಭಾನುವಾರ ಹೈದರಾಬಾದ್ ನಲ್ಲಿ ನಡೆಯಲಿದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು