ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಬಂದ್

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ಬಂದ್

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಓಲಾ ಉಬರ್ ಸೇರಿದಂತೆ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ. ಈ ಹಿಂದೆ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿದೆ.

ಮೋಟಾರು ವಾಹನ ಕಾಯ್ದೆಯ ನಿಯಮ ಗಳ ಪ್ರಕಾರವಾಗಿ ಹಳದಿ ನೋಂದಣಿ ಫ‌ಲಕ ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬು ದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡ ಬೇಕು ಎಂದು ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ರೊಪ್ಪೆನ್‌ ಟ್ರಾನ್ಸ್‌ಪೊರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬೈಕ್‌ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದಿಸಿ, ನಾಲ್ಕು ಚಕ್ರ ವಾಹನಗಳು ಮತ್ತು ಮೂರು ಚಕ್ರ ವಾಹನಗಳು ಅನುಮತಿ ಪಡೆದು ತೆರಿಗೆ ಪಾವತಿಸಿ ಬಾಡಿಗೆ ವಾಹನಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ದ್ವಿ ಚಕ್ರವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಚರಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

ದ್ವಿಚಕ್ರ ವಾಹನಗಳು ಬಾಡಿಗೆ ವಾಹನಗಳಾಗಿ ಕಾರ್ಯಾಚರಣೆ ನಡೆಸಲು ದೇಶದಲ್ಲಿ 8 ರಾಜ್ಯಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು. ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿದೆ.

ಹಾಗೆಯೇ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು