Breaking News : ಬಿಜೆಪಿ ಮುಖಂಡ ದೇವರಾಜೇ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನ
ಲಿಂಕ್ ನಕಲಿಸಲಾಗಿದೆ ✓
ಪ್ರಜ್ವಲ್ ರೇವಣ್ಣನ ಅತ್ಯಾಚಾರ ಪ್ರಕರಣದಲ್ಲಿ ಅತಿ ಹೆಚ್ಚು ಹೆಸರು ಕೇಳಿ ಬಂದಿದ್ದ, ದೇವರಾಜೇ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇವರಾಜೇಗೌಡ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬಂಧನದ ಸುಳಿವು ಸಿಗುತ್ತಿದ್ದಂತೆ ಪರಾರಿಯಾಗಲು ದೇವರಾಜೇಗೌಡ ಯತ್ನಿಸಿದ್ದು, ಅವರ ಮೊಬೈಲ್ ಲೊಕೇಶನ್ ಆಧರಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಸಮೀಪ ಅವರನ್ನು ಬಂಧಿಸಲಾಗಿತ್ತು.
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ