ಪತ್ರಿಕಾಗೋಷ್ಠಿ ವೇಳೆ ವ್ಯಕ್ತಿಗೆ ಮುತ್ತಿಟ್ಟ ಬಿಜೆಪಿ ಶಾಸಕ – ಮರ್ಯಾದೆ ಇಲ್ಲಾ ಎಂದ ನೆಟ್ಟಿಗರು
ಲಿಂಕ್ ನಕಲಿಸಲಾಗಿದೆ ✓
ಒಡಿಶಾ: ಸಚಿವರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವಾಗಲೇ, ಅವರ ಪಕ್ಕದಲ್ಲಿ ನಿಂತಿದ್ದ ಬಿಜೆಪಿ (BJP) ಶಾಸಕರೊಬ್ಬರು ತಮ್ಮ ಪಕ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೆ ಮುತ್ತಿಡುತ್ತಿರುವಂತೆ ಕಾಣುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ (Video Viral) ಆಗುತ್ತಿದೆ.
ಒಡಿಶಾದ ಗಂಜಾಂ ಜಿಲ್ಲೆಯ ಚಿಕಿಟಿ (Chikiti) ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮನೋರಂಜನ್ ದ್ಯಾನ್ ಸಾಮಂತರ (Manoranjan Dyan Samantara) ಅವರು ತಮ್ಮ ಪಕ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೆ ಮುತ್ತಿಟ್ಟಿದ್ದಾರೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಜನಪ್ರತಿನಿಧಿ ಎನ್ನಲಾಗಿದೆ. ನವೆಂಬರ್ 13ರಂದು ಈ ದೃಶ್ಯಾವಳಿಗಳು ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಚಿವರೊಬ್ಬರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವಂತೆ ವಿಡಿಯೋದಲ್ಲಿ ಕಂಡುಬಂದಿದೆ. ಆದರೆ, ಈ ವಿಡಿಯೋವನ್ನು ನಿಖರವಾಗಿ ಯಾವಾಗ ಚಿತ್ರೀಕರಿಸಲಾಗಿದೆ ಮತ್ತು ಆ ಕ್ಷಣದ ಸನ್ನಿವೇಶ ಏನಾಗಿತ್ತು ಎಂಬ ಬಗ್ಗೆ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಕುರಿತು ಪರ-ವಿರೋಧ ಚರ್ಚೆಗಳು ಶುರುವಾಗಿದ್ದರೂ, ಶಾಸಕ ಮನೋರಂಜನ್ ದ್ಯಾನ್ ಸಾಮಂತರ ಅವರಾಗಲಿ ಅಥವಾ ವಿಡಿಯೋದಲ್ಲಿ ಅವರ ಪಕ್ಕದಲ್ಲಿದ್ದ ವ್ಯಕ್ತಿಯಾಗಲಿ ಈ ಬಗ್ಗೆ ಇದುವರೆಗೆ ಯಾವುದೇ ಸ್ಪಷ್ಟನೆ ಅಥವಾ ಪ್ರತಿಕ್ರಿಯೆ ನೀಡಿಲ್ಲ. ವಿಡಿಯೋದ ಸತ್ಯಾಸತ್ಯತೆ ಮತ್ತು ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ