ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೈದರಾಬಾದ್ ನ ಪ್ರಸಿದ್ಧ “ಕರಾಚಿ ಬೇಕರಿ”ಯನ್ನು ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

P

Peepal Media Desk • ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ಹೈದರಾಬಾದ್ ನ ಪ್ರಸಿದ್ಧ “ಕರಾಚಿ ಬೇಕರಿ”ಯನ್ನು ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

ಹೈದರಾಬಾದ್‌ನ ಶಂಷಾಬಾದ್‌ನಲ್ಲಿರುವ “ಕರಾಚಿ ಬೇಕರಿ”ಯನ್ನು ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಪಾಕಿಸ್ತಾನದ ನಗರದ ಹೆಸರು ಹೊಂದಿರುವ “ಕರಾಚಿ ಬೇಕರಿ” ಈಗ ಕೇಸರಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

1953ರಲ್ಲಿ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದ ಖಾಂಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಕರಾಚಿ ಬೇಕರಿಯನ್ನು ಸ್ಥಾಪಿಸಿದ್ದರು. ಕಾಲಕ್ರಮೇಣ ಈ ಬೇಕರಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತ್ತು. ಆದರೆ ಈಚಿನ ದಿನಗಳಲ್ಲಿ ಭಾರತ ಪಾಕಿಸ್ತಾನದ ನಡುವೆ ಇರುವ ವೈಷಮ್ಯ ಮತ್ತಷ್ಟು ಹೆಚ್ಚಿದ ಹಿನ್ನಲೆಯಲ್ಲಿ ಕರಾಚಿ ಬೇಕರಿ ಹೆಸರಿನ ಕುರಿತಾಗಿ ಒಂದಷ್ಟು ಅಪಸ್ವರಗಳೂ ಕೇಳಿ ಬಂದಿದ್ದವು.

‘ಕರಾಚಿ ಬೇಕರಿ ಎಂಬ ಹೆಸರು ನಮ್ಮ ಕುಟುಂಬದ ಇತಿಹಾಸವನ್ನು ಪ್ರತಿನಿಧಿಸುತ್ತದೆ, ಇದು ರಾಷ್ಟ್ರೀಯತೆಯನ್ನು ಸಂಕೇತಿಸುವುದಿಲ್ಲ,’ ಎಂದು ವಿವಾದದ ಹಿನ್ನೆಲೆಯಲ್ಲಿ ಮಾಲಿಕರಾದ ರಾಜೇಶ್ ರಾಮ್ನಾನಿ ಮತ್ತು ಹರೀಶ್ ರಾಮ್ನಾನಿ ತಿಳಿಸಿದ್ದರು. ಅಷ್ಟೇ ಅಲ್ಲದೆ ‘ನಾವು ಭಾರತೀಯರಾಗಿ ದೇಶಕ್ಕೆ ಬದ್ಧರಾಗಿದ್ದೇವೆ. ದಯವಿಟ್ಟು ಈ ವಿಷಯವನ್ನು ರಾಜಕೀಯಗೊಳಿಸದೆ ನಮಗೆ ಸಹಕಾರ ನೀಡಿ,’ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ತಿಳಿಸಿದ್ದರು.

ಆದರೆ ಭಾನುವಾರ ಬಿಜೆಪಿ ಕಾರ್ಯಕರ್ತರು ಹೈದರಾಬಾದ್ ನ ಕರಾಚಿ ಬೇಕರಿಯನ್ನು ಧ್ವಂಸ ಮಾಡಿದ್ದಾರೆ. ಕೇಸರಿ ಸ್ಕಾರ್ಫ್ ಧರಿಸಿ ಭಾರತೀಯ ಧ್ವಜವನ್ನು ಹಿಡಿದಿದ್ದ ಗುಂಪೊಂದು ‘ಕರಾಚಿ’ ಕೃತಿಯನ್ನು ಪ್ರದರ್ಶಿಸುವ ಸೈನ್ ಬೋರ್ಡ್‌ಗೆ ಕೋಲುಗಳಿಂದ ಹೊಡೆದು ಹಾಕಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಪಡೆಗಳು ನಡೆಸಿದ ಮಿಲಿಟರಿ ದಾಳಿಯಾದ ಆಪರೇಷನ್ ಸಿಂಧೂರ್ ಮತ್ತು ಭಾರತೀಯ ಪಡೆಗಳನ್ನು ಸೂಚಿಸುತ್ತಾ ಅವರು ‘ಪಾಕಿಸ್ತಾನ್ ಮುರ್ದಾಬಾದ್’ ಮತ್ತು ‘ಜೈ ಜವಾನ್’ ಘೋಷಣೆಗಳನ್ನು ಕೂಗಿದರು.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version