ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ನೇಪಾಳ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ – ಸೋನು ಸೂದ್

ಮುಂಬೈ: ಭಾರತದ ನೆರೆಯ ರಾಷ್ಟ್ರವಾದ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಪ್ರವಾಹದಿಂದ ಉಂಟಾದ ವಿನಾಶದೊಂದಿಗೆ ನೇಪಾಳವು ಹೋರಾಡುತ್ತಿದ್ದು, ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತರಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಪ್ರವಾಹ ಬಾಧಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚುವ ಮೂಲಕ ಖ್ಯಾತ ನಟ ಸೋನು ಸೂದ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ನೇಪಾಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಸೋನು ಸೂದ್ ಮುಂದೆ ಬಂದಿದ್ದಾರೆ.ನೇಪಾಳ ಪ್ರವಾಹದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ನೇಪಾಳದ ಜನರು ಒಂಟಿಯಲ್ಲ ಮತ್ತು ನಾನು ಅವರೊಂದಿಗೆ ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದಾರೆ. “ನೇಪಾಳ, ನೀವು ಒಂಟಿಯಲ್ಲ. ನಾವು ಆಹಾರ, ಆಶ್ರಯ ಮತ್ತು ಪುನರ್ ನಿರ್ಮಾಣಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ನೇಪಾಳದ ರಾಷ್ಟ್ರಧ್ವಜ ಮತ್ತು ಹೃದಯದ ಚಿಹ್ನೆಯ ಎಮೋಜಿ ಹಾಕಿದ್ದಾರೆ.

ಖ್ಯಾತ ಬಾಲಿವುಡ್ ನಟಿ ಮನೀಶಾ ಕೊಯಿರಾಲಾ ಕೂಡ ನೇಪಾಳ ಪ್ರವಾಹದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನೇಪಾಳಕ್ಕಾಗಿ ಪ್ರಾರ್ಥನೆಗಳು. ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲೋಣ” ಎಂದು ಅವರು ಬರೆದುಕೊಂಡಿದ್ದಾರೆ ಮನೀಶಾ ಅವರಿಗೆ ನೇಪಾಳದೊಂದಿಗೆ ಆಳವಾದ ನಂಟಿದೆ ಎಂಬುದು ಗಮನಾರ್ಹ. ಅವರ ಮೂಲಗಳು ನೇಪಾಳದಲ್ಲಿವೆ. ಅವರ ಅಜ್ಜ ವಿಶ್ವೇಶ್ವರ ಪ್ರಸಾದ್ ಕೊಯಿರಾಲಾ ಅವರು ನೇಪಾಳದ ಮೊದಲ ಚುನಾಯಿತ ಪ್ರಧಾನ ಮಂತ್ರಿಯಾಗಿದ್ದರು. ಈ ನಟಿ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನಿಸಿದ್ದರು.

ಬುಧವಾರ ಬೆಳಿಗ್ಗೆ ಟಿಬೆಟ್ ಗಡಿ ಮಧ್ಯದಲ್ಲಿರುವ ನೇಪಾಳದ ಜಿಲ್ಲೆಗಳಲ್ಲಿ ಭಾರಿ ಪ್ರವಾಹ ಉಂಟಾಗಿದ್ದು,ಅನೇಕ ಮನೆಗಳು, ಜಲವಿದ್ಯುತ್ ಯೋಜನೆಗಳು ಮತ್ತು ಸೇತುವೆಗಳು ನಾಶಗೊಂಡಿವೆ. ಈ ದುರಂತದಲ್ಲಿ ಇಲ್ಲಿಯವರೆಗೆ 160 ಜನರು ಸಾವನ್ನಪ್ಪಿದ್ದಾರೆ ಮತ್ತು 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಟಿಬೆಟ್‌ನಲ್ಲಿಯೂ 550 ಜನರು ನಾಪತ್ತೆಯಾಗಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ವಿಷಯಗಳು: #india #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು