ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಭದ್ರತೆಯ ನೆಪದಲ್ಲಿ ಬಾಲಕಿಯರ ಖಾಸಗಿ ಕೋಣೆಯಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ: ಚೈತನ್ಯಾನಂದ ಸರಸ್ವತಿ ಸ್ವಾಮಿಯ ವಿರುದ್ಧದ ಎಫ್ಐಆರ್ ನಲ್ಲಿ ಬಗೆದಷ್ಟೂ ಅಕ್ರಮ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಭದ್ರತೆಯ ನೆಪದಲ್ಲಿ ಬಾಲಕಿಯರ ಖಾಸಗಿ ಕೋಣೆಯಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ: ಚೈತನ್ಯಾನಂದ ಸರಸ್ವತಿ ಸ್ವಾಮಿಯ ವಿರುದ್ಧದ ಎಫ್ಐಆರ್ ನಲ್ಲಿ ಬಗೆದಷ್ಟೂ ಅಕ್ರಮ

ಶೃಂಗೇರಿ ಮಠಕ್ಕೆ ಸಂಬಂಧಿಸಿದ ದೆಹಲಿಯ ಶಾರದಾ ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣದಲ್ಲಿ ಬಗೆದಷ್ಟೂ ಅಕ್ರಮ ಅನಾಚಾರ ಬೆಳಕಿಗೆ ಬರುತ್ತಿದೆ. ಚೈತನ್ಯಾನಂದ ಸರಸ್ವತಿ ಸ್ವಾಮಿ ಯಾನೆ ಪಾರ್ಥಸಾರಥಿ ವಿರುದ್ಧ ದಾಖಲಾಗಿರುವ ಎಫ್ಐಆರ್ ನಲ್ಲಿ ಆಘಾತಕಾರಿ ಅಂಶಗಳು ಹೊರಬಿದ್ದಿವೆ.

ಎಫ್‌ ಐಆರ್‌ ಪ್ರಕಾರ, ಭದ್ರತೆಯ ನೆಪದಲ್ಲಿ ಬಾಲಕಿಯರ ಹಾಸ್ಟೆಲ್‌ನ ಖಾಸಗಿ ಕೋಣೆಯ ಒಳಗೂ ರಹಸ್ಯ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ತನಿಖೆಯ ನಂತರ ಹೆಚ್ಚಿನ ಸಿಸಿಟಿವಿ ದೃಶ್ಯಾವಳಿಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿಹಾಕಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳ ಪೋಷಕರನ್ನು ಸಹ ಮಧ್ಯಪ್ರವೇಶಿಸದಂತೆ ತಡೆಯಲಾಯಿತು. ಸ್ವಾಮಿ ಚೈತನ್ಯಾನಂದ ಸರಸ್ವತಿ ಮತ್ತು ಅವರ ಸಹಚರರು ವಿದ್ಯಾರ್ಥಿನಿಯರನ್ನು ಲೈಂಗಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಪಡಿಸಿದ್ದರು. ವಾಟ್ಸಾಪ್ ಮತ್ತು ಎಸ್‌ಎಂಎಸ್ ಮೂಲಕ ಅಶ್ಲೀಲ ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಲಾಗಿತ್ತು. ಅವರು ಈ ಕ್ರಮಗಳನ್ನು ವಿರೋಧಿಸಿದರೆ, ವಿದ್ಯಾರ್ಥಿಗಳ ಪದವಿಗಳನ್ನು ತಡೆಹಿಡಿಯುವ ಮತ್ತು ದಾಖಲೆಗಳನ್ನು ತಡೆಹಿಡಿಯುವ ಬೆದರಿಕೆ ಹಾಕಲಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ ನಂತರ ಶೃಂಗೇರಿ ಮಠದ ಆಡಳಿತ ತಕ್ಷಣ ಸ್ವಾಮೀಜಿಯನ್ನು ವಜಾ ಮಾಡಿದೆ. ಕೇಸ್‌ ದಾಖಲಾಗುತ್ತಿದ್ದಂತೆಯೇ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಪರಾರಿ ಆಗಿದ್ದಾರೆ. ಪೊಲೀಸರು ತಲಾಶ್ ನಡೆಸಿದ್ದಾರೆ. ಇನ್ನು ಶಾರದಾ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯಲ್ಲಿ ವೋಲ್ವೋ ಕಾರು ಪತ್ತೆಯಾಗಿದ್ದು ನಕಲಿ ನಂಬರ್‌ ಪ್ಲೇಟ್ ಹೊಂದಿದೆ. ಈ ಬಗ್ಗೆ ಪ್ರತ್ಯೇಕ ದೂರು ದಾಖಲಾಗಿದೆ. ಆರೋಪಿ ವಿದೇಶಕ್ಕೆ ಪಲಾಯನ ಮಾಡುವುದನ್ನು ತಡೆಯಲು ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು