ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಶಾಸಕ ಸಿಮೆಂಟ್ ಮಂಜು ಅಡ್ಡ ಮತದಾನಕ್ಕೆ 5 ಕೋಟಿ ಡೀಲ್ -ಹೆಚ್.ಎಂ. ವಿಶ್ವನಾಥ್ ಗಂಭೀರ ಆರೋಪ

ಬಿಜೆಪಿ ಶಾಸಕ ಸಿಮೆಂಟ್ ಮಂಜು ಅಡ್ಡ ಮತದಾನಕ್ಕೆ 5 ಕೋಟಿ ಡೀಲ್ -ಹೆಚ್.ಎಂ. ವಿಶ್ವನಾಥ್ ಗಂಭೀರ ಆರೋಪ

ಸಕಲೇಶಪುರ: ಸಕಲೇಶಪುರ-ಆಲೂರು ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ವಿರುದ್ಧ ಅದೇ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್ ಅತ್ಯಂತ ಗಂಭೀರ ಹಾಗೂ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ಅಡ್ಡ ಮತದಾನ ಮಾಡಲು ಇವರಿಗೆ ಐದು, ಆರು, ಹತ್ತು ಕೋಟಿ ರೂಪಾಯಿ ಕೊಡಲಾಗಿದೆ. ದೊಡ್ಡ ದುಡ್ಡು ಸಿಕ್ಕಿದ್ದಕ್ಕೆ ಶಾಸಕ ಸ್ಥಾನವನ್ನೇ ಮಾರಿಕೊಂಡಿದ್ದಾರೆ” ಎಂದು ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರ ವಿರುದ್ಧ ಭ್ರಷ್ಟಾಚಾರ, ಮರಳು ಲೂಟಿ ಹಾಗೂ ಕಾಡುಪ್ರಾಣಿಗಳ ಶಿಕಾರಿ ಸೇರಿದಂತೆ ಸಾಲು ಸಾಲು ಆರೋಪಗಳ ಪಟ್ಟಿಯನ್ನೇ ಬಿಚ್ಚಿಟ್ಟಿದ್ದಾರೆ.

10% ಕಮಿಷನ್ ಗಲಾಟೆಗೆ 18 ಕೆಲಸಗಳು ಸ್ಥಗಿತ

ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರತಿಯೊಂದು ಕಾಮಗಾರಿಗಳಲ್ಲೂ ಶಾಸಕರು ಶೇಕಡಾ 10 ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ ವಿಶ್ವನಾಥ್, “ಜೆಜೆಎಂ (ಜಲ ಜೀವನ್ ಮಿಷನ್) ಯೋಜನೆಯಲ್ಲಿ ದೊಡ್ಡ ಮಟ್ಟದ ಲೂಟಿ ನಡೆದಿದೆ. ಶಾಸಕರ ಪರ್ಸೆಂಟೇಜ್ ಗಲಾಟೆಯಿಂದಾಗಿಯೇ ಸದ್ಯ ಕ್ಷೇತ್ರದಲ್ಲಿ 18 ಪ್ರಮುಖ ಕಾಮಗಾರಿಗಳು ಸ್ಥಗಿತಗೊಂಡಿವೆ. ಆ ಎಂಜಲು ಕಾಸಿಗೆ ಇವರು ಆಸೆ ಪಡಬೇಕಾ?” ಎಂದು ಪ್ರಶ್ನಿಸಿದ್ದಾರೆ. ಮರಳು ಲೂಟಿಗೆ ಸಹೋದರರ ನೇಮಕ; ಕಾಡೆಮ್ಮೆ ಮಾಂಸ ದಂಧೆ!

“ಕಳೆದ ನಾಲ್ಕು ವರ್ಷಗಳಿಂದ ಹೇಮಾವತಿ ನದಿಯಿಂದ ಮರಳನ್ನು ಲೂಟಿ ಮಾಡಲಾಗುತ್ತಿದೆ. ಈ ಹಿಂದೆ ಇದ್ದ ಶಾಸಕರು ಬೇಡ ಎಂದು ಮರಳು ದಂಧೆ ನಿಲ್ಲಿಸಿದ್ದರು, ಆದರೆ ಇವರು ಮತ್ತೆ ಅದೇ ಲೂಟಿ ಆರಂಭಿಸಿದ್ದಾರೆ. ಮರಳು ದಂಧೆಯನ್ನು ಮುನ್ನಡೆಸಲು ಶಾಸಕರು ತಮ್ಮ ಸ್ವಂತ ಸಹೋದರರನ್ನೇ ನೇಮಿಸಿದ್ದಾರೆ” ಎಂದು ಆರೋಪಿಸಿದರು.ಇಷ್ಟಕ್ಕೇ ನಿಲ್ಲಿಸದ ಹೆಚ್.ಎಂ. ವಿಶ್ವನಾಥ್, “ಕ್ಷೇತ್ರದಲ್ಲಿ ಕಾಡೆಮ್ಮೆಗಳನ್ನು ಕಡಿದು, ಅದರ ಮಾಂಸವನ್ನು ಪ್ರತಿ ಕೆಜಿಗೆ 2,000 ರೂಪಾಯಿಯಂತೆ ಮಾರಾಟ ಮಾಡುವ ದಂಧೆ ನಡೆಯುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಶಾಸಕರ ಧ್ವನಿ ಎಲ್ಲಿ ಹೋಗಿದೆ?” ಎಂದು ಆಕ್ರೋಶ ಹೊರಹಾಕಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು