ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶೀಘ್ರದಲ್ಲೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ವಿಲೀನಕ್ಕೆ ಸೂಚನೆ ಕೊಟ್ಟ ಕೇಂದ್ರ ಸರ್ಕಾರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಶೀಘ್ರದಲ್ಲೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ವಿಲೀನಕ್ಕೆ ಸೂಚನೆ ಕೊಟ್ಟ ಕೇಂದ್ರ ಸರ್ಕಾರ

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್​ಆರ್​ಬಿ) ವಿಲೀನದ ಬಗ್ಗೆ ಸುಳಿವು ನೀಡಿರುವ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇದನ್ನು ಕಾರ್ಯರೂಪಕ್ಕೆ ತರಲು ಯೋಜನೆ ರೂಪಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ಈ ವಿಲೀನ ಪ್ರಕ್ರಿಯೆಗೆ ಮುಂದಾಗಿದ್ದು, ಒಂದು ದೇಶ ಒಂದು ಗ್ರಾಮೀಣ ಬ್ಯಾಂಕ್ ರೀತಿಯಲ್ಲಿ ಇದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.

ಸಧ್ಯ ವಿಲೀನಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದೆ. ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ 15 ಬ್ಯಾಂಕುಗಳು ವಿಲೀನಗೊಳ್ಳಲಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಆಂಧ್ರಪ್ರದೇಶದಲ್ಲಿ ನಾಲ್ಕು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ. ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು, ಕರ್ನಾಟಕ, ಗುಜರಾತ್, ಜಮ್ಮು-ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಆರ್​ಆರ್​ಬಿಗಳಿವೆ. ಈ ಬ್ಯಾಂಕ್​ಗಳ ಕಾರ್ಯಾಚರಣೆ ವೆಚ್ಚ ಕಡಿತಗೊಳಿಸುವ ಉದ್ದೇಶದಿಂದ ಸರ್ಕಾರ ವಿಲೀನಕ್ಕೆ ಮುಂದಾಗಿದೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಬಂಡವಾಳ ವೆಚ್ಚ ಏರಿಕೆ ಇರುವಾಗಲೇ ಕೇಂದ್ರ ಸರ್ಕಾರ ಈ ನಿಲುವು ತೆಗೆದುಕೊಂಡಿರುವ ಬಗ್ಗೆ ಗ್ರಾಮೀಣ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಗ್ರಾಮೀಣ ಬ್ಯಾಂಕುಗಳು ಈಗಾಗಲೇ 7,571 ಕೋಟಿ ರೂ. ನಿವ್ವಳ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ಈ ವಿಲೀನದ ಅಗತ್ಯವಾದರೂ ಏನು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು