ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚೈತ್ರಾ ಕುಂದಾಪುರ ಪ್ರಕರಣ: ತನಿಖೆ ಪೂರ್ಣಗೊಳಿಸಿದ ಸಿಸಿಬಿ, ಮುಂದಿನ ವಾರ ದೋಷಾರೋಪ ಪಟ್ಟಿ ಸಲ್ಲಿಕೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಚೈತ್ರಾ ಕುಂದಾಪುರ ಪ್ರಕರಣ: ತನಿಖೆ ಪೂರ್ಣಗೊಳಿಸಿದ ಸಿಸಿಬಿ, ಮುಂದಿನ ವಾರ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಹಿಂದುತ್ವ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಕೇಂದ್ರ ಅಪರಾಧ ವಿಭಾಗವು ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ ಮತ್ತು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಉದ್ಯಮಿ ಗೋವಿಂದ್ ಬಾಬು ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾಸಿಗಾಗಿ ಟಿಕೆಟ್ ಹಗರಣದ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

68 ಸಾಕ್ಷಿಗಳಿಂದ ಹೇಳಿಕೆ ಪಡೆದು ಆಡಿಯೋ, ವೀಡಿಯೋ ಮುಂತಾದ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿ, ಚೈತ್ರಾ ಕುಂದಾಪುರ ಸೇರಿ ಆರು ಮಂದಿ ಗೋವಿಂದ್ ಬಾಬುಗೆ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಐದು ಕೋಟಿ ರೂಪಾಯಿ ಪಡೆದು ವಂಚಿಸಿರುವ ಪ್ರಕರಣದ ತನಿಖೆಯನ್ನು ಸಿಬಿಬಿ ಪೊಲೀಸರು ಮುಕ್ತಾಯಗೊಳಿಸಿದ್ದಾರೆ.

ಮುಂದಿನ ವಾರ ಸಿಸಿಬಿ ಪೊಲೀಸರು ಏಳು ಜನರ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್ ಕಡೂರ್, ವಿಜಯನಗರ ಮಠದ ಹಾಲಶ್ರೀ, ಧನರಾಜ್ ಮತ್ತು ಚನ್ನನಾಯಕ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳಿಂದ 4.11 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ದೂರುದಾರರಾದ ಗೋವಿಂದ್ ಬಾಬು ಅವರು ಚೈತ್ರಾ ಮತ್ತು ಗ್ಯಾಂಗ್ ಐದು ಕೋಟಿ ರೂಪಾಯಿಗಳನ್ನು ಕಂತುಗಳಲ್ಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು ಮತ್ತು ಅವರು ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಿಸಿ ಅವರಿಗೆ ಬಿಜೆಪಿ ಟಿಕೆಟ್ ಭರವಸೆ ನೀಡಿದ್ದರು. ಹಣ ಪಡೆದ ನಂತರ ಆರೋಪಿಗಳು ತಮ್ಮಿಂದ ಹಣ ಪಡೆದಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ವಿಶ್ವನಾಥ್‌ ಮೃತಪಟ್ಟಿದ್ದು, ಮರುಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಹಣ ಹಿಂದಿರುಗಿಸಲು ಹಲವು ಸುತ್ತಿನ ಸಭೆ ನಡೆಸಿದರೂ ವಿಫಲವಾದ ಹಿನ್ನೆಲೆಯಲ್ಲಿ ಗೋವಿಂದ್ ಬಾಬು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಚೈತ್ರಾ ಕುಂದಾಪುರ ಈ ಹಿಂದೆ ಸಿಸಿಬಿ ಕಸ್ಟಡಿಯಲ್ಲಿದ್ದಾಗ ಈ ಪ್ರಕರಣದಲ್ಲಿ ಹಲವು ‘ದೊಡ್ಡವರ’ ಕೈವಾಡವಿದೆ ಎಂದು ಆರೋಪಿಸಿದ್ದಳು.

ಇನ್ನೊಂದು ಪ್ರಕರಣದಲ್ಲಿ ಮೊನ್ನೆಯಷ್ಟೇ ಚೈತ್ರಾಳನ್ನು ವಿಚಾರಣೆ ಸಲುವಾಗಿ ಕೋಟ ಠಾಣೆಯ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೋಗಿ ವಿಚಾರಣೆಗೆ ಒಳಪಡಿಸಿದ್ದರು. ಈ ಪ್ರಕರಣದಲ್ಲಿ ಆಕೆ ಕೇಸರಿ ಬಣ್ಣದ ಬಟ್ಟೆಯ ವಿವಿಧ ವಸ್ತ್ರಗಳನ್ನು ಮಾರುವ ಅಂಗಡಿಯಿಟ್ಟುಕೊಡುವುದಾಗಿ ಹೇಳಿ ಸುದಿನ್‌ ಎನ್ನುವವರಿಗೆ ಹಲವು ಲಕ್ಷ ರೂಪಾಯಿಗಳ ಮೊತ್ತವನ್ನು ವಂಚಿಸಿದ್ದಳು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು