ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚನ್ನಪಟ್ಟಣ ಉಪಚುನಾವಣೆ: ಮೂಡದ ಒಮ್ಮತ ; ಶಾಸಕ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ, ತ್ರಿಕೋನ ಸ್ಪರ್ಧೆ ನಿರೀಕ್ಷೆ

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಚನ್ನಪಟ್ಟಣ ಉಪಚುನಾವಣೆ: ಮೂಡದ ಒಮ್ಮತ ; ಶಾಸಕ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ, ತ್ರಿಕೋನ ಸ್ಪರ್ಧೆ ನಿರೀಕ್ಷೆ

ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಮೂರೂ ಪಕ್ಷಗಳಿಗೂ ತಲೆನೋವಾಗಿ ಪರಿಣಮಿಸಿದೆ. ಇದರ ಪ್ರಮುಖ ಕೇಂದ್ರಬಿಂದುವಾಗಿರುವ ಮಾಜಿ ಶಾಸಕ ಸಿಪಿ ಯೋಗೇಶ್ವರ್ ನಿಲುವಿನ ಮೇಲೆ ಕೇಂದ್ರಿತವಾಗಿರುವ ಕ್ಷೇತ್ರದ ರಾಜಕೀಯ ಈಗ NDA ದೋಸ್ತಿಗೂ ಮುಳುವಾಗುವ ಸಾಧ್ಯತೆ ಇದೆ ಎಂಬ ರಾಜಕೀಯ ಮಾತುಕತೆ ಶುರುವಾಗಿದೆ.

ಇಲ್ಲಿಯವರೆಗೂ NDA ನಿಲುವೇ ಅಂತಿಮ ಎಂದು ಹೇಳುತ್ತಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ, ಒಳಗೊಳಗೇ ತಮ್ಮ ಪುತ್ರನನ್ನು ಅಖಾಡಕ್ಕೆ ಬಿಡುವ ಬಗ್ಗೆಯೇ ಬಿಜೆಪಿ ಹೈಕಮಾಂಡ್ ಗೆ ಒತ್ತಡ ಹಾಕುತ್ತಿದ್ದರು. ಇತ್ತೀಚಿನ ವರೆಗೂ ಮೌನವಾಗಿದ್ದ ಬಿಜೆಪಿ ರಾಜ್ಯ ನಾಯಕರು ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಪಿ ಯೋಗೇಶ್ವರ್ ಪರ ಬ್ಯಾಟ್ ಬೀಸುತ್ತಿರುವುದು ನೋಡಿದರೆ NDA ಒಳಗೆ ಯಾವುದೂ ಸರಿ ಇಲ್ಲ ಎಂಬಂತಾಗಿದೆ.

ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ. ಯೋಗೇಶ್ವರ್ ಟಿಕೆಟ್ ವಂಚಿತವಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಇಲ್ಲವಾದರೆ, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷದಿಂದಲೂ ಕಣಕ್ಕಿಳಿಯುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎನ್ನುತ್ತಾರೆ ಅವರನ್ನು ಹತ್ತಿರದಿಂದ ಬಲ್ಲವರು.

ಇಲ್ಲಿಯವರೆಗೂ ಕ್ಷೇತ್ರ ಬಿಟ್ಟುಕೊಡುವ ಮಾತಿಲ್ಲ ಎಂದೇ ಪಟ್ಟು ಹಿಡಿದಿದ್ದ ಜೆಡಿಎಸ್ ಈಗ ಕೊಂಚ ಪಟ್ಟು ಸಡಿಲಿಸಿ, ಯೋಗೇಶ್ವರ್ ಚುನಾವಣೆಗೆ ನಿಲ್ಲಲಿ ಎಂಬ ನಿರ್ಧಾರಕ್ಕೆ ಬಂದಿದೆ. ಆದರೆ ಯೋಗೇಶ್ವರ್ ಮುಂದಿಟ್ಟ ಷರತ್ತು ಮಾತ್ರ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಂತೆ ಯೋಗೇಶ್ವರ್ ಚುನಾವಣೆ ನಿಲ್ಲುವುದಾದರೆ ನಿಲ್ಲಲಿ. ಆದರೆ ಜೆಡಿಎಸ್ ಚಿಹ್ನೆಯಿಂದ ನಿಲ್ಲಲಿ ಎಂಬ ಷರತ್ತು ವಿಧಿಸಿದೆ.

ಇದೆಲ್ಲದರ ಬೆಳವಣಿಗೆಯಂತೆ ಈಗ ಸಿಪಿ ಯೋಗೇಶ್ವರ್ ಈಗ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.

ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಚಿಸಿರುವ ಸಿಪಿ ಯೋಗೇಶ್ವರ್‌, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆ ಮೂಲಕ ದೋಸ್ತಿ ನಾಯಕರಿಗೆ ಸಿಪಿವೈ ಸಡ್ಡು ಹೊಡೆದಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version