ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ಪಾವತಿ: ಸ್ಪಷ್ಟನೆ ನೀಡಿದ ಬಿಎಂಆರ್ಸಿಎಲ್

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ಪಾವತಿ: ಸ್ಪಷ್ಟನೆ ನೀಡಿದ ಬಿಎಂಆರ್ಸಿಎಲ್

ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೂ ದುಡ್ಡು ಕೊಡಬೇಕು ಎನ್ನುವ ಸುದ್ದಿ ಭಾರೀ ಚರ್ಚೆಯಾಗಿರುವ ನಡುವೆಯೇ ಬಿಎಂಆರ್‌ಸಿಎಲ್ (BMRCL) ಸ್ಪಷ್ಟನೆ ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ ಎಂದು ಸ್ಪಷ್ಟಪಡಿಸಿದೆ. ಬದಲಾಗಿ ಸ್ವೈಪ್ ಕೇಂದ್ರದಿಂದ ಹೊರಗಿರುವ ಶೌಚಾಲಯಗಳಲ್ಲಿ ಶುಲ್ಕ ಪಾವತಿ ಮಾಡಬೇಕು ಎಂದು ತಿಳಿಸಿದೆ.

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯಗಳಿಗೆ ಬಳಕೆದಾರರ ಶುಲ್ಕ ನಿಗದಿ ಮಾಡಿರುವುದಿಲ್ಲ. ಮೆಟ್ರೋ ಸ್ವೈಪ್ ಗೇಟ್ ಒಳಗೆ ಇರುವ ಶೌಚಾಲಯಗಳ ಬಳಕೆ ಮುಂದೆಯೂ ಉಚಿತವಾಗಿ ಇರುತ್ತದೆ. ಆದ್ರೆ, ಮೆಟ್ರೋ ಸ್ವೈಪ್​ಗೇಟ್ ಗಿಂತ ಹೊರಗಿರುವ ಶೌಚಾಲಯಗಳನ್ನು ಪ್ರಯಾಣಿಕರಲ್ಲದೇ ಬೇರೆ ಸಾರ್ವಜನಿಕರು ಬಳಸುತ್ತಾರೆ. ಹೀಗಾಗಿ ಅಂತಹ ಶೌಚಾಲಯಗಳಿಗೆ ಮಾತ್ರ ಶುಲ್ಕ ನಿಗದಿ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್​ ಸ್ಪಷ್ಟಪಡಿಸಿದೆ.

“ಪ್ರಯಾಣ ದರವನ್ನು ಶೇ.71ರಷ್ಟು ಏರಿಕೆ ಮಾಡಿದ್ದ ಸರ್ಕಾರ ಇದೀಗ ಶೌಚಾಲಯಗಳನ್ನು ಬಳಸಲು ಜನರಿಂದ ಹಣ ಕೀಳಲು ಮುಂದಾಗಿದೆ” ಎಂದು ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಆರೋಪಿಸಿದ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಈ ಸ್ಪಷ್ಟನೆ ನೀಡಿದೆ. ಮೆಟ್ರೋ ಪ್ರಯಾಣ ದರ ಹಿನ್ನೆಲೆಯಲ್ಲಿ ಶೌಚಾಲಯಕ್ಕೂ ಹಣ ನೀಡಬೇಕು ಎನ್ನುವ ಅಂಶವನ್ನು ಪರಿಗಣಿಸಿ ಬಿಜೆಪಿ ಸರ್ಕಾರದ ಮೇಲೆ ಆರೋಪಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಮೆಟ್ರೋ ಪ್ರಯಾಣ ದರ ಶೇ.71ರಷ್ಟು ಏರಿಕೆ ಮಾಡಿದ್ದ ಸರ್ಕಾರ ಇದೀಗ ಬೆಂಗಳೂರಿನ 12 ಮೆಟ್ರೋ ನಿಲ್ದಾಣಗಳಲ್ಲಿನ ಶೌಚಾಲಯಗಳ ಬಳಸಲು ಜನರಿಂದ ಶುಲ್ಕ ಪಡೆಯುವ ಹಂತಕ್ಕೆ ಬಂದಿದೆ . ಈಗಾಗಲೇ ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕುಸಿಯುತ್ತಿರುವ ಮೂಲಸೌಕರ್ಯಗಳೊಂದಿಗೆ ಹೋರಾಡುತ್ತಿರುವ ನಗರದಲ್ಲಿ, ಕಾಂಗ್ರೆಸ್ ಈಗ ಮೂಲಭೂತ ಮಾನವ ಅಗತ್ಯಗಳನ್ನು ಪೂರೈಸುವಲ್ಲಿಯೂ ಹಣ ಮಾಡುವ ಮಾರ್ಗವನ್ನು ಕಂಡುಕೊಂಡಿದೆ ಎಂದು ಆರೋಪಿಸಿದ್ದರು

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version