ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುಳ್ಳು ಸುದ್ದಿ ಹರಡುವವರಿಗೆ ಬೀಳುತ್ತೆ ಗುದ್ದು ; ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಅಸ್ತು

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸುಳ್ಳು ಸುದ್ದಿ ಹರಡುವವರಿಗೆ ಬೀಳುತ್ತೆ ಗುದ್ದು ; ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಅಸ್ತು

ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ, ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ – ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ  ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಗೃಹ ಕಚೇರಿ  ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ  ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದ್ದಾರೆ. ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆ
ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ  ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ  ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ  ಎಂದು ಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯ ಪಟ್ಟರು.

ಸಚಿವರಾದ ಕೃಷ್ಣಬೈರೇಗೌಡ ಅವರು ಮಾತನಾಡಿ  ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ  ಅಲೋಕ್ ಮೋಹನ್ ,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version