ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣೆಗು ಮುನ್ನ ಸಿದ್ದರಾಮಾಯಣ ಶುರುವಾಗಿದೆ : ಹೆಚ್ ಡಿ ಕೆ

P
ಚುನಾವಣೆಗು ಮುನ್ನ ಸಿದ್ದರಾಮಾಯಣ ಶುರುವಾಗಿದೆ : ಹೆಚ್ ಡಿ ಕೆ

ಬೆಂಗಳೂರು : ಚುನಾವಣೆಗೂ ಮುನ್ನವೆ ವಿರೋಧ ಪಕ್ಷದ ಹೈಡ್ರಾಮ  ಶುರುವಾಗಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್‌ .ಡಿ. ಕುಮಾರ್‌ ಸ್ವಾಮಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ  ಜನಾತ ದಳದ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು? ಎಂದು ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ? ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ ಎಂದು ಪ್ರೆಶ್ನಿಸಿದ್ದಾರೆ.

ಮಹಾತ್ಮ ಗಾಂಧಿ ಅವರ ಕಾಂಗ್ರೆಸ್ ಪಕ್ಷವನ್ನು ನೀವೆಲ್ಲಾ ಸೇರಿ ಎಂದೋ ಮುಗಿಸಿದಿರಿ. ಅದಕ್ಕೆ ಸಮಾಧಿಯೂ ಕಟ್ಟಿ ತಿಥಿ ಊಟವನ್ನೂ ಮಾಡಿದ್ದೀರಿ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೇಳಿದ ತಲೆ ತಲೆಮಾರುಗಳ ಲೂಟಿ ಕಾಂಗ್ರೆಸ್ ಮಾತ್ರವಷ್ಟೇ ಈಗ ಉಳಿದಿರುವುದು. ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ? ಅಧಿಕಾರಕ್ಕಾಗಿ ಸ್ವಾತಂತ್ರ್ಯ ಹೋರಾಟದ ಜಪವೇ? ನೇರವಾಗಿ ಕುರ್ಚಿ ಜಪವನ್ನೇ ಮಾಡಬಹುದಲ್ಲವೇ? ಎಂದರು.

ಅಂದು ದೇಶ ಉಳಿಸಿದ ಕಾಂಗ್ರೆಸ್ ಬೇರೆ, ಈಗ ದೇಶವನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ಸೇ ಬೇರೆ. ಲೂಟಿ ಹೊಡೆಯೋದೇ ದೇಶಪ್ರೇಮವಾ ಮಿಸ್ಟರ್ ಸಿದ್ದರಾಮಯ್ಯ? ನಿಮ್ಮ 5 ವರ್ಷದ ಆಡಳಿತದಲ್ಲಿ ನಿಮ್ಮ ಸುತ್ತಮುತ್ತಲಿನ ಪಟಾಲಂ ಹೊಡೆದ ಕೊಳ್ಳೆಯ ಲೆಕ್ಕ ಕೊಡಲೇ? ಅರ್ಕಾವತಿ ರೀಡು ಹಗರಣ ತೆಗೆದರೆ ಮುಖ ಎಲ್ಲಿಟ್ಟುಕೊಳ್ಳುತ್ತೀರಿ? ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಆಶ್ರಯ ಕೊಟ್ಟ ಮನೆಯಲ್ಲೇಗಳ ಇರಿದವರು ಯಾರು?ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ? ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ? ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದಿದ್ದಾರೆ.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version