ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೋವಿ ನಿಗಮದ ಕಚೇರಿ ಮೇಲೆ ಸಿಐಡಿ ದಾಳಿ; ಹಲವು ಮಹತ್ವದ ದಾಖಲೆಗಳು ವಶಕ್ಕೆ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಬೋವಿ ನಿಗಮದ ಕಚೇರಿ ಮೇಲೆ ಸಿಐಡಿ ದಾಳಿ; ಹಲವು ಮಹತ್ವದ ದಾಖಲೆಗಳು ವಶಕ್ಕೆ

ಇಂದು ಬೆಳ್ಳಂಬೆಳಿಗ್ಗೆ ಬೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳು ಮತ್ತು ಕಡತಗಳನ್ನು ವಶಕ್ಕೆ ಪಡೆದಿದ್ದಾರೆ. ನಿಗಮದ ಒಳಗೆ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನ ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ನಿಗಮದ ಕಚೇರಿಯ ಮೇಲೆ ದಾಳಿ ಮಾಡಿದ್ದು, ಸತತ ಮೂರು ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲ ಮಹತ್ವದ ಕಡತಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದ ಕಳೆದ 2021-22 ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ನಡೆದ ಅಕ್ರಮ, ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆಗಳನ್ನು ದುರ್ಬಳಕೆ ಹಾಗೂ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿರುವ ಆರೋಪ ಬೋವಿ ನಿಗಮದಲ್ಲಿ ಕೇಳಿ ಬಂದಿತ್ತು.

ಕಚೇರಿಗೆ ಸಂಬಂಧಿಸಿದ ಲೆಕ್ಕಪತ್ರ, ಕಡತ, ನಗದು ಪುಸ್ತಕಗಳು, ಅಲ್ಲದೆ ಯೋಜನಾ ಕಡತಗಳು, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳನ್ನು ಆಗಿನ ಅಧ್ಯಕ್ಷರಾಗಿದ್ದ ಸುಬ್ಬಪ್ಪ ಕಳ್ಳತನ ಮಾಡಿದ್ದ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ದೂರು ಕೂಡ ದಾಖಲಾಗಿತ್ತು.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಅದಾದ ಬಳಿಕ ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧ್ಯಕ್ಷ ಸುಬ್ಬಪ್ಪ ಅವರನ್ನ ಬಂಧಿಸಿದ್ದರು. ಇದೀಗ ಸಿಐಡಿ ದಾಖಲೆ ವಶಪಡಿಸಿಕೊಂಡದ್ದಕ್ಕೆ ಸಂಬಂಂಧಿಸಿದಂತೆ ಹಲವು ಮಹತ್ವದ ದಾಖಲೆಯಲ್ಲಿ ಸಾಕ್ಷ್ಯ ಹೊರಬೀಳಬಹುದು ಎನ್ನಲಾಗಿದೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version