ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ, ಮಹದಾಯಿ, ಮೇಕೆದಾಟು ಜಲವಿವಾದ : ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುಲು ಸಿಎಂ ಸಿದ್ದರಾಮಯ್ಯ ಚಿಂತನೆ

P

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಕಾವೇರಿ, ಮಹದಾಯಿ, ಮೇಕೆದಾಟು ಜಲವಿವಾದ : ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುಲು ಸಿಎಂ ಸಿದ್ದರಾಮಯ್ಯ ಚಿಂತನೆ

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ
7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ
ಕಾವೇರಿ-ಮಹದಾಯಿ-ಮೇಕೆದಾಟು ವಿಚಾರಕ್ಕಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರುಗಳ ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಪಕ್ಷಗಳ ನಾಯಕರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈವರೆಗೆ ಕಾವೇರಿ ಪ್ರಾಧಿಕಾರ 22 ಸಭೆ, ನಿಯಂತ್ರಣ ಸಮಿತಿಯಲ್ಲಿ 84 ಸಭೆಗಳು ನಡೆದಿವೆ. ರಾಜ್ಯವನ್ನು ಪ್ರತಿನಿಧಿಸುವ ಅಧಿಕಾರಿ ಮತ್ತು ವಕೀಲರ ತಂಡ ವಾಸ್ತವ ಸ್ಥಿತಿಯನ್ನು ಸಮರ್ಥವಾಗಿ ಪ್ರಾಧಿಕಾರದ ಮುಂದೆ, ನಿಯಂತ್ರಣ ಸಮಿತಿ ಮುಂದೆ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೂ ನಾವು 24 ಟಿಎಂಸಿ ಮಾತ್ರ ಬಿಡುಗಡೆ ಮಾಡಿದ್ದೇವೆ. ನಿಗಧಿ ಮಾಡಿದ್ದಕ್ಕಿಂತ ಕಡಿಮೆ ನೀರು ಬಿಟ್ಟಿದ್ದೀವಿ. ಮೂರನೇ ಒಂದು ಭಾಗದಷ್ಟು ಮಾತ್ರ ನೀರು ಬಿಟ್ಟಿದ್ದೀವಿ ಅಷ್ಟೆ. ಈ ಬಗ್ಗೆ ನಾವು ಸಮರ್ಥ ವಾದ ಮಂಡಿಸಿದ್ದರಿಂದಲೇ ತಮಿಳುನಾಡಿನ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಆದೇಶವಾಯಿತು. ಸಮರ್ಥ ವಾದ ಮಂಡಿಸದಿದ್ದರೆ ಆದೇಶದಲ್ಲಿನ ನೀರಿನ ಪ್ರಮಾಣ ಇನ್ನೂ ಹೆಚ್ಚಿರುತ್ತಿತ್ತು ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡಿದ್ದಾರೆ.

ನಮ್ಮ ಕಾನೂನು ತಂಡಕ್ಕೆ, ತಜ್ಞರ ತಂಡಕ್ಕೆ ಅಗತ್ಯವಾದ ಸಕಲ ನೆರವು ನೀಡುತ್ತಿದ್ದೇವೆ. ನಾವು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸುವಾಗಲೇ‌ ತಮಿಳುನಾಡಿನವರು walk out ಮಾಡಿದರು. ಬಳಿಕ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ಸ್ ನೀರನ್ನೂ ಬಿಡಲು ಸಾಧ್ಯವಿಲ್ಲ ಎಂದು ಮತ್ತೆ ಸಮರ್ಥ ವಾದ ಮಂಡಿಸುತ್ತೇವೆ ಎಂದು ಸರ್ವಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ ಸೇರಿದಂತೆ ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version