ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕನ್ನಡಿಗರ ಅವಹೇಳನ ; ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಕನ್ನಡಿಗರ ಅವಹೇಳನ ; ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಕನ್ನಡದ ಬಗ್ಗೆ ಲಘುವಾಗಿ ಮಾತನಾಡಿದ ಬಹುಭಾಷಾ ಗಾಯಕ ಸೋನು ನಿಗಮ್ ಅವರ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಡೆಯಿಂದ ದಾಖಲಾದ ಈ ದೂರಲ್ಲಿ ಕನ್ನಡಿಗರ ಭಾವನೆಗೆ ದಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸೋನು ನಿಗಮ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ತಮ್ಮ ಪ್ರದರ್ಶನದ ಸಮಯದಲ್ಲಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದು ಕನ್ನಡಿಗರ ಭಾಷಾ ಭಾವನೆಗೆ ದಕ್ಕೆ ತರುವಂತಾಗಿದೆ‌. ಸೋನು ನಿಗಮ್ ಅವರು, ಕನ್ನಡ ಹಾಡುಗಳು ಎಂದರೆ ತುಂಬ ಇಷ್ಟ. ಕರ್ನಾಟಕ ಎಂದರೆ ತುಂಬ ಇಷ್ಟ ಎಂದು ಹೇಳುತ್ತಾರೆ. ಅದೇ ಸಮಯಕ್ಕೆ ಓರ್ವ ಹುಡುಗ ಕನ್ನಡದಲ್ಲಿ ಹಾಡಿ ಎಂದು ಗದರಿಸುವ ರೀತಿಯಲ್ಲಿ ಒತ್ತಾಯ ಮಾಡಿದ್ದಾನೆ. ಆಗ ಸೋನು ಅವರು ಪಹಲ್ಗಾಮ್ ಘಟನೆಯನ್ನು ನೆನಪಿಸಿಕೊಂಡಿದ್ದಾರೆ..

“ಓರ್ವ ಹುಡುಗ ನನಗೆ ಕನ್ನಡ ಹಾಡು ಹಾಡಿ ಎಂದ. ಅವನು ಹುಟ್ಟುವ ಮೊದಲಿನಿಂದಲೂ ನಾನು ಕನ್ನಡ ಹಾಡುಗಳನ್ನು ಹಾಡುತ್ತಿದ್ದೇನೆ. ಆದರೆ ಆ ಹುಡುಗ ‘ಕನ್ನಡ, ಕನ್ನಡ’ ಎಂದು ಒರಟಾಗಿ ಬೆದರಿಕೆ ಹಾಕಿದ್ದು ನನಗೆ ಇಷ್ಟವಾಗಲಿಲ್ಲ. ಇಂತಹದೇ ವರ್ತನೆಯ ಪರಿಣಾಮ ಪಹಲ್ಗಾಮ್ ದಾಳಿಗೆ ಕಾರಣವಾಗಿದೆ” ಎಂದು ಸೋನು ನಿಗಮ್ ಒರಟಾಗಿ ಪ್ರತಿಕ್ರಿಯಿಸಿದ್ದರು.

ಅವರು ಹುಟ್ಟುವ ಮೊದಲೇ ನಾನು ಕನ್ನಡ ಹಾಡುಗಳನ್ನು ಹಾಡಲು ಪ್ರಾರಂಭಿಸಿದ್ದೆ” ಎಂದು ಸೋನು ನಿಗಮ್ ಹೇಳಿದರು. “ಇದಕ್ಕಾಗಿಯೇ ಪಹಲ್ಗಾಮ್ ದಾಳಿ ನಡೆಯಿತು – ಅಂತಹ ವರ್ತನೆಗಾಗಿ. ಅಂತಹ ಬೇಡಿಕೆಗಳನ್ನು ಇಡುವ ಮೊದಲು ನಿಮ್ಮ ಮುಂದೆ ಯಾರು ಇದ್ದಾರೆ ಎಂದು ನೋಡಿ” ಎಂದು ಅವರು ವೇದಿಕೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಕನ್ನಡಿಗರ ಭಾವನೆಗೆ ದಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸೋನು ನಿಗಮ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು