ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಂದಿ ವಿಚಾರದಲ್ಲಿ ಗೊಂದಲ: ಪಿಐಎಲ್ ವಜಾ ಮಾಡಿದ ಹೈಕೋರ್ಟ್, ಸಚಿವರ ಹೇಳಿಕೆ ತಿರುಚಲು ಯತ್ನಿಸಿದ ಅರ್ಜಿದಾರರಿಗೆ ₹1 ಲಕ್ಷ ದಂಡ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಹಿಂದಿ ವಿಚಾರದಲ್ಲಿ ಗೊಂದಲ: ಪಿಐಎಲ್ ವಜಾ ಮಾಡಿದ ಹೈಕೋರ್ಟ್, ಸಚಿವರ ಹೇಳಿಕೆ ತಿರುಚಲು ಯತ್ನಿಸಿದ ಅರ್ಜಿದಾರರಿಗೆ ₹1 ಲಕ್ಷ ದಂಡ

ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನ ಕುರಿತು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ ಹೇಳಿಕೆಗೆ ವಿರೋಧವಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ, ಅರ್ಜಿಯನ್ನು ಆಧಾರರಹಿತವೆಂದು ತಳ್ಳಿ ಹಾಕಿ ಅರ್ಜಿದಾರರಿಗೆ ₹1 ಲಕ್ಷ ದಂಡ ವೆಚ್ಚ ವಿಧಿಸಿದೆ.

ಸಚಿವರು ಇತ್ತೀಚೆಗೆ ತೃತೀಯ ಭಾಷೆಗಳ ಅಂಕಗಳನ್ನು ಅಂತಿಮ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸೇರಿಸಲಾಗುವುದಿಲ್ಲ, ಅವುಗಳನ್ನು ಪ್ರತ್ಯೇಕವಾಗಿ ಶ್ರೇಣೀಕರಿಸಲಾಗುತ್ತದೆ ಎಂದು ಹೇಳಿದ್ದರು. ಅಂದರೆ, ಈ ವಿಷಯಗಳ ಅಂಕಗಳು ವಿದ್ಯಾರ್ಥಿಗಳ ಉತ್ತೀರ್ಣತೆ ಮೇಲೆ ಪರಿಣಾಮ ಬೀರುವುದಿಲ್ಲ.

ಈ ಹೇಳಿಕೆ ಹಿಂದಿ ಭಾಷೆಯನ್ನು ಕಡೆಗಣಿಸುವಂತಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಚಂದನ ಎಂಬವರು ಪಿಐಎಲ್ ಸಲ್ಲಿಸಿದ್ದರು. ಆದರೆ, ಅರ್ಜಿದಾರರು ಉಲ್ಲೇಖಿಸಿದ ಪತ್ರಿಕಾ ವರದಿಗಳಲ್ಲಿ ಹಿಂದಿಯನ್ನು ತೆಗೆದುಹಾಕುವ ಬಗ್ಗೆ ಯಾವುದೇ ಸ್ಪಷ್ಟ ಹೇಳಿಕೆ ಇಲ್ಲ ಎಂದು ನ್ಯಾಯಾಲಯ ಗಮನಿಸಿದೆ.

“ಇದು ಕೇವಲ ಪತ್ರಿಕೆಯಲ್ಲಿನ ಕೆಲವು ಪದಗಳ ಆಧಾರದಲ್ಲಿ ಸಲ್ಲಿಸಿದ ಪ್ರಚಾರ ಹಿತಾಸಕ್ತಿ ಅರ್ಜಿ,” ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.

ಮೊದಲಿಗೆ ₹50,000 ವೆಚ್ಚ ವಿಧಿಸಿದ್ದ ನ್ಯಾಯಾಲಯ, ನಂತರ ಅರ್ಜಿದಾರರು ಹೆಚ್ಚುವರಿ ವಾದ ಮಂಡಿಸಿದ ಹಿನ್ನೆಲೆಯಲ್ಲಿ ಅದನ್ನು ₹1 ಲಕ್ಷಕ್ಕೆ ಹೆಚ್ಚಿಸಿತು.

ಈ ವೆಚ್ಚವನ್ನು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಪಾವತಿಸದಿದ್ದರೆ ಭೂಕಂದಾಯ ಬಾಕಿಯಾಗಿ ವಸೂಲಿ ಮಾಡುವುದಾಗಿ ಎಚ್ಚರಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು