ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭ : ಹೆಚ್ಡಿಕೆ ಸವಾಲು

ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭ : ಹೆಚ್ಡಿಕೆ ಸವಾಲು

ಹಾಸನ : ನನ್ನ ಮಗನನ್ನು ಮುಗಿಸಲು ಕಾಂಗ್ರೆಸ್ ನಾಯಕರು ಏನು ಕುತಂತ್ರ ಮಾಡಿದ್ರೂ ಅದು ಸಾದ್ಯವಿಲ್ಲ. ಜನ ಚುನಾವಣೆಯಲ್ಲಿ ತೋರಿಸುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭವಾಗುತ್ತದೆ ಎಂದು ಹಾಸನಾಂಬೆ ದರ್ಶನ ಮಾಡಿ ಹೇಳ್ತಾ ಇದೀನಿ ಬರೆದಿಟ್ಟುಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸವಾಲು ಎಸೆದ ಪ್ರಸಂಗ ನಡೆಯಿತು.

ನಗರದ ರಿಂಗ್ ರಸ್ತೆ ಬಳಿ ಇರುವ ಶಾಸಕ ಹೆಚ್.ಪಿ. ಸ್ವರೂಪ್ ಮನೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಮಳೆಯ ಅನಾಹುತವಾಗಿದ್ದು, ರಾಜ್ಯದಲ್ಲಿ ರೈತರ ಬದುಕು ಧಾರುಣವಾಗಿದೆ. ನೆನ್ನೆ ಸಿಎಂ ಅವರು ಡಿಸಿ ಸಿಎಸ್ ಗಳ ಜೊತೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುಮಾರು ೮೦ ಸಾವಿರ ಹೆಕ್ಟೇರ್ ಭೂಮಿ ಬೆಳೆ ನಷ್ಟದ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ ಅನಾಹುತಗಳೆ ರೈತರ ಬದುಕಿನ ಜೊತೆ ಚಲ್ಲಾಟ ಆಡಿದೆ. ಮುಂಗಾರಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾದವು ನಮ್ಮ ಕೆರೆ ತುಂಬಿಸದೆ ಹೊದರು ತಮಿಳುನಾಡಿಗೆ ನೀರು ಬಿಟ್ಟರು.

ಈಗಲೂ ನೀರಿದ್ದು, ಕುಡಿಯೊ ನೀರಿಗೆ ಸಮಸ್ಯೆ ಆಗೋದಿಲ್ಲ. ಸರ್ಕಾರದ ಅಂದಾಜಿನ ಪ್ರಕಾರವೇ ರೈತರ ಆತ್ಮಹತ್ಯೆ ಪ್ರಕರಣ ಶುರುವಾಗಿದೆ. ಯುವಕರು ಕೂಡ ಆನ್ಲೈನ್ ಲಾಟರಿಯಿಂದ ಕರ್ನಾಟಕ ಮಾದಕ ವಸ್ತುಗಳ ರಾಜ್ಯವಾಗಿ ಬದಲಾಗುತ್ತಿರೊ ಬಗ್ಗೆ ಓದಿದೆ. ಎಲ್ಲದಕ್ಕು ಫುಲ್ ಪ್ರೀಡಂ ಕೊಟ್ಟಿದ್ದಾರೆ. ಜನ ಸಾಮಾನ್ಯರ ಬದುಕಿನ ಜೊತೆ ಚಲ್ಲಾಟ ಆಡುತ್ತಿದ್ದಾರೆ. ಎಲ್ಲಾ ಬೆಳೆ ನಷ್ಟ ಆದರು ಸರ್ಕಾರ ಪರಿಹಾರ ಕೊಡೊದಾಗಿ ಹೇಳುತ್ತಿದ್ದಾರೆ ಆದರೆ ಕೊಟ್ಟಿಲ್ಲ. ಇನ್ನು ಹದಿನೈದು ದಿನದಲ್ಲಿ ಉಪ ಚುನಾವಣೆ ನಡೆಯಲಿದ್ದು, ಹಾನಿ ಬಗ್ಗೆ ಸಚಿವರ ಉಸ್ತುವಾರಿ ಹಾಕಲಿಲ್ಲ.

ಆದರೆ ಚುನಾವಣೆ ಉಸ್ತುವಾರಿ ಆಗಿ ಹಾಕುತ್ತಿದ್ದಾರೆ. ಸರ್ಕಾರ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲು ಮುಂದಾಗದೇ ಬರೀ ಸಭೆ ಮಾಡಿದರೆ ಆಗಲ್ಲ. ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಿ ಮಾಹಿತಿ ಪಡೆದು ರೈತರಿಗೆ ವಿಶ್ವಾಸ ತುಂಬ ಬೇಕು. ಚುನಾವಣೆ ಘೋಷಣೆ ಆಗಿ ನಾಮಪತ್ರ ಸಲ್ಲಿಕೆ ಆಗಿದೆ.

ಚನ್ನಪಟ್ಟಣ ರಾಜ್ಯ ಅಷ್ಟೆ ಅಲ್ಲ ದೇಶದ ಗಮನ ಸೆಳೆಯೊದನ್ನ ಕಂಡಿದ್ದೇನೆ. ಚನ್ನಪಟ್ಟಣದ ವಿಷಯದಲ್ಲಿ ವಿರೋದಿಗಳು ಕೊಡ್ತಿರೊ ಹೇಳಿಕೆ ಗಮನಿಸಿದ್ದು, ಅವರಿಗೆ ಜನರೇ ಉತ್ತರ ಕೊಡುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಜನರು ಅಭಿಮನ್ಯು ಮಾಡುವುದಿಲ್ಲ. ಅರ್ಜುನನ ಪಾತ್ರ ಕೊಡ್ತಾರೆ. ಖಂಡಿತಾ ಏನೇ ಕುತಂತ್ರ ಮಾಡಿದರು ಕೂಡ ಜನರು ನಿಖಿಲ್ ಗೆಲ್ಲಿಸುತ್ತಾರೆ. ಸಹೋದರರು ಎನು ನಿಲ್ಲಿಸಿಕೊಂಡಿದ್ದಾರೆ ಅವರು ಪರಸ್ಪರ ಏನು ಚರ್ಚೆ ಮಾಡಿಕೊಂಡಿದ್ದರು ಎಂದು ಗಮನಿಸಿದರೆ ಸಾಕು. ಆಗ ಜನರೇ ತೀರ್ಮಾನ ಮಾಡ್ತಾರೆ.

ಜಿಎಸ್ ಟಿ ಹಂಚಿಕೆ ವಿಚಾರದಲ್ಲಿ ಗೊಂದಲ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇದು ನೀವೇ ಮಾಡಿದ್ದು, ಆಗ ಇದು ಅರ್ಥ ಆಗಿರಲಿಲ್ಲವೇ. ಮನಮೋಹನ್ ಸಿಂಗ್, ಚಿದಂಬರಂ ಅವರೆಲ್ಲಾ ಕೂತೆ ಮಾಡಿದ್ದು ಅಲ್ಲವಾ. ಆಗ ಈ ಸಮಸ್ಯೆ ಆಗುತ್ತೆ ಎಂದು ಗೊತ್ತಿರಲಿಲ್ಲವೇ. ಕೊಟ್ಟ ಅನುದಾನವನ್ನು ಬಳಸಿಕೊಳ್ಳದೆ ಏನೇನೊ ಹೇಳಿದ್ರೆ ಆಗುವುದಿಲ್ಲ. ಬರೀ ಮಾತಾಡಿಕೊಂಡು ಕೂತರೆ ಆಗುತ್ತಾ! ಸಮಸ್ಯೆ ಅರ್ಥ ಮಾಡಿಸಬೇಕಲ್ಲ. ಕೊಟ್ಟ ಕುದುರೆ ಏರದವನು ವೀರನು ಅಲ್ಲ ಶೂರನು ಅಲ್ಲ ಅಂತಾ ಹೇಳ್ತೀರಲ್ಲ. ಆ ಮಾತು ನಿಮಗೇ ಅನ್ವಯ ಆಗುತ್ತೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ರಾಜಕೀಯ ಮಾಡ್ತಾರೆ ಎಂದು ಟೀಕೆ ವಿಚಾರವಾಗಿ ಮಾತನಾಡಿ, ನಾನು ಮಾಡೊ ಕೆಲಸ ಲೆಕ್ಕ ಕೇಳೋದು ಪ್ರದಾನಿ ಅವರು. ಕಾಂಗ್ರೆಸ್ ನಾಯಕರಿಗೆ ನಾನು ಉತ್ತರ ಕೊಡಬೇಕಿಲ್ಲ ಎಂದು ಗುಡುಗಿದರು. ಅಖಾಡ ಸಿದ್ದ ಆಗಿದೆ. ಅಭ್ಯರ್ಥಿ ಘೋಷಣೆ ಆಗಿದೆ ಅದರ ಬಗ್ಗೆ ಈಗ ಮಾತಾಡೊದು ಬೇಡ. ಮೈತ್ರಿ ಮಾಡಿಸಿದ್ದು ನಾನೆ, ಕುಮಾರಸ್ವಾಮಿ ಗೆಲ್ಲಿಸಿದ್ದು ನಾನೆ ಮಂಜುನಾಥ ಗೆಲ್ಲಿಸಿದ್ದು ನಾನೇ ಅಂತಾರೆ. ಹಾಗಿದ್ದರೆ ಅವರ ಹೈ ಕಮಾಂಡ್ ಜೊತೆ ಬಿ ಫಾರಂ ಪಡೆದು ಯಾಕೆ ಚುನಾವಣೆಗೆ ನಿಲ್ಲಲಿಲ್ಲ.. ಚನ್ನಪಟ್ಟಣದಲ್ಲಿ ನನ್ನ ನಿಲ್ತಿನಿ ಅಂತಾ ಬಂದಿರಲಿಲ್ಲ. ಅನಿವಾರ್ಯವಾಗಿ ಅವರಿಗೆ ಕಟ್ಟಿದ್ದಾರೆ ಅಷ್ಟೇ.

ಅವರು ಚುನಾವಣೆ ಮುಗಿದೇ ಹೋಗಿದೆ ಅಂದುಕೊಂಡಿದ್ದಾರೆ. ಆದರೆ ಚನ್ನಪಟ್ಟಣದಲ್ಲಿ ಜನರು ತೀರ್ಮಾನ ಮಾಡ್ತಾರೆ. ಚನ್ನಪಟ್ಟಣ ಮೊದಲಿಂದಲೂ ಜೆಡಿಎಸ್ ಕೋಟೆ ಅದು. ನಮ್ಮಲ್ಲಿನ ಕೆಲ ತಪ್ಪಿನಿಂದ ಹಿನ್ನಡೆ ಆಗಿತ್ತು ಅಷ್ಟೆ. ಅದನ್ನ ಸರಿಮಾಡಲು ನನ್ನನ್ನ ರಾಮನಗರ ದಿಂದ ಚನ್ನಪಟ್ಟಣಕ್ಕೆ ಕರೆದೊಯ್ದರು. ಈಗ ಎಲ್ಲವು ಕೂಡ ಸರಿಯಾಗಿದೆ. ಕುಮಾರಸ್ವಾಮಿ ಮಗನನ್ನು ಮುಗಿಸಲು ಕಾಂಗ್ರೆಸ್ ನಾಯಕರು ಏನು ಕುತಂತ್ರ ಮಾಡಿದರು. ಅದು ಸಾದ್ಯವಿಲ್ಲ ಎಂದು ಜನ ತೋರಿಸುತ್ತಾರೆ. ಚನ್ನಪಟ್ಟಣದಿಂದ ಅವರ ಅವನತಿ ಆರಂಭವಾಗುತ್ತದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಸಿದ ಅವರು, ಹಾಸನಾಂಬೆ ದರ್ಶನ ಮಾಡಿ ಹೇಳ್ತಾ ಇದೀನಿ ಬರೆದಿಟ್ಟುಕೊಳ್ಳಿ ಎಂದು ಕುಮಾರಸ್ವಾಮಿ ಅವರ ಸವಾಲು ಹಾಕಿದರು. ನಮ್ಮಲ್ಲಿ ಯಾವುದೇ ಸಮನ್ವಯದ ಕೊರತೆ ಇಲ್ಲ. ಸಮನ್ವಯದ ಕೊರತೆ ಇರೋರು ಕಾಂಗ್ರೆಸ್ ನಲ್ಲಿ ಎಂದು ಟಾಂಗ್ ನೀಡಿದರು.

ಇದೆ ವೇಳೆ ಶಾಸಕ ಹೆಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ, ಮಾಜಿ ಶಾಸಕ ಕೆ.ಎಸ್. ಲಿಂಗೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಪರಮೇಶ್ವರಪ್ಪ, ಬೈಲಹಳ್ಳಿ ಸತ್ಯನಾರಾಯಣ್, ಸುಮುಖ ರಘು, ಹೊಂಗೆರೆ ರಘು ಇತರರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು