ರಾಹುಲ್ ಗಾಂಧಿಯವರ ಅವಹೇಳನ: ಅಮಿತ್ ಮಾಳವೀಯ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್
ಲಿಂಕ್ ನಕಲಿಸಲಾಗಿದೆ ✓
ಕರ್ನಾಟಕ ಕಾಂಗ್ರೆಸ್ ಬಿಜೆಪಿ ಮುಖಂಡ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬುಧವಾರ ಬೆಂಗಳೂರಿನಲ್ಲಿ ರಾಹುಲ್ ಗಾಂಧಿಯವರನ್ನು ‘ಅಪಹಾಸ್ಯ’ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದೆ.

ಮಾಳವಿಯಾ ಅವರು ರಾಹುಲ್ ಗಾಂಧಿಯವರ ಅನಿಮೇಟೆಡ್ ವೀಡಿಯೊ ಶೇರ್ ಮಾಡಿದ ಆರೋಪದ ಮೇಲೆ ಪಕ್ಷ ಪ್ರಕರಣ ದಾಖಲಿಸಿದೆ. ಕಾಂಗ್ರೆಸ್‌ನ ರಮೇಶ್ ಬಾಬು ಅವರು ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A 120b 505(2), 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ