ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬಾಕಿ ಬಿಲ್‌ಗಳಿಗಾಗಿ ಫೆ.12ರಂದು ಫ್ರೀಡಂ ಪಾರ್ಕ್‌ನಲ್ಲಿ ಗುತ್ತಿಗೆದಾರರ ಪ್ರತಿಭಟನೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಬಾಕಿ ಬಿಲ್‌ಗಳಿಗಾಗಿ ಫೆ.12ರಂದು ಫ್ರೀಡಂ ಪಾರ್ಕ್‌ನಲ್ಲಿ ಗುತ್ತಿಗೆದಾರರ ಪ್ರತಿಭಟನೆ

ರಾಜ್ಯ ಸರ್ಕಾರದಿಂದ ಬಾಕಿ ಉಳಿದಿರುವ ಸಾವಿರಾರು ಕೋಟಿ ರೂಪಾಯಿ ಬಿಲ್‌ಗಳ ತೆರವಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಟನೆ (KSCA) ಫೆಬ್ರವರಿ 12ರಂದು (ಗುರುವಾರ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಕಳೆದ ನಾಲ್ಕು ಆರ್ಥಿಕ ವರ್ಷಗಳಲ್ಲಿ — 2022-23, 2023-24, 2024-25 ಹಾಗೂ 2025-26 ಅವಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮೂಲಕ ಸುಮಾರು ರೂ.37,000 ಕೋಟಿ ಮೊತ್ತದ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಂಘಟನೆ ಆರೋಪಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವಿವಿಧ ಸಚಿವರು ಹಾಗೂ ಇಲಾಖಾ ಕಾರ್ಯದರ್ಶಿಗಳನ್ನು ಹಲವು ಬಾರಿ ಭೇಟಿ ಮಾಡಿ ಸಮಸ್ಯೆ ಕುರಿತು ಚರ್ಚಿಸಲಾಗಿದೆ. ಆದರೂ ಯಾವುದೇ ಸ್ಪಷ್ಟ ಪರಿಹಾರ ದೊರಕಿಲ್ಲ ಎಂದು KSCA ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಯಿಂದ ಮುಖ್ಯಮಂತ್ರಿಗಳೊಂದಿಗೆ ಸಂಘಟನೆಯ ಪದಾಧಿಕಾರಿಗಳ ಅಧಿಕೃತ ಸಭೆ ನಡೆಯದೇ ಇರುವುದನ್ನು ಸಂಘಟನೆ ಉಲ್ಲೇಖಿಸಿದ್ದು, ನಿಗದಿಪಡಿಸಿದ್ದ 2–3 ಸಭೆಗಳು ಯಾವುದೇ ಕಾರಣ ತಿಳಿಸದೆ ಮುಂದೂಡಲ್ಪಟ್ಟಿವೆ ಎಂದು ಆರೋಪಿಸಿದೆ.

ಇದೇ ರೀತಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಲಾದರೂ, ಸಭೆ ನಡೆಸುವ ಭರವಸೆ ನೀಡಿದ ಹೊರತು ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಸಂಘಟನೆ ಹೇಳಿದೆ.

ಜನವರಿ 29, 2026ರಂದು ಸಂಘಟನೆಯು ಪತ್ರಿಕಾಗೋಷ್ಠಿ ನಡೆಸಿ, ಬಾಕಿ ಬಿಲ್‌ಗಳ ತಕ್ಷಣದ ಬಿಡುಗಡೆ, ಹಿರಿಯತ್ವ (ಸೀನಿಯಾರಿಟಿ) ಕಾಪಾಡುವುದು ಹಾಗೂ ಒಂದೇ ಕಂತಿನಲ್ಲಿ ಆದ್ಯತೆಯ ಮೇರೆಗೆ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಜನವರಿ 30ರಂದು ವರದಿಯಾಗಿತ್ತು. ಆದರೂ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು KSCA ಹೇಳಿದೆ.

ಈ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸಿ, ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಂಘಟನೆ ಕರೆ ನೀಡಿದೆ.

ಪ್ರತಿಭಟನೆಯ ಯಶಸ್ಸಿಗಾಗಿ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲೆಯ ಜಿಲ್ಲೆಗೆ ಪ್ರವಾಸ ಮಾಡಿ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದು, ತಾಲ್ಲೂಕು ಮಟ್ಟದ ಸಂಘಟನೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು