ನ್ಯಾ.ಯಶವಂತ ವರ್ಮಾ ತಲೆದಂಡಕ್ಕೆ ಕ್ಷಣಗಣನೆ; ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ
ಲಿಂಕ್ ನಕಲಿಸಲಾಗಿದೆ ✓

ದೆಹಲಿ, ಮೇ,05: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಸಿಕ್ಕ ಕೋಟ್ಯಂತರ ಮೌಲ್ಯದ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತ ವರ್ಮಾ ಅವರ ಭಾಗಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಮ್ಮ ಸ್ಥಾನದಿಂದ ವಜಾ ಮಾಡುವ ಪ್ರಕ್ರಿಯೆ ಶುರುವಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮತ್ತು ಪ್ರಧಾನಿಗೆ ಪತ್ರ ಬರೆಯುವ ಮೂಲಕ ಪ್ರಕ್ರಿಯೆ ಶುರು ಮಾಡಿದ್ದಾರೆ.
ಮಾರ್ಚ್ 14 ರಂದು ಯಶವಂತ್ ವರ್ಮಾ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ಸೇವಾ ಅಧಿಕಾರಿಗಳು ಮತ್ತು ಪೊಲೀಸರು ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದರು, ಅರ್ಧ ಸುಟ್ಟ ಕರೆನ್ಸಿ ನೋಟುಗಳನ್ನು ಚೀಲದಲ್ಲಿ ರಾಶಿ ಹಾಕಿರುವುದನ್ನು ಕಂಡ ನಂತರ ಪೊಲೀಸರು ಹಣದ ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದು ವೈರಲ್ ಆಗಿತ್ತು. ಆ ನಂತರ ಪ್ರಕರಣವೂ ದಾಖಲಾಗಿತ್ತು.
ನ್ಯಾಯಮೂರ್ತಿ ಯಶವಂತ ವರ್ಮಾ ಪ್ರಸ್ತುತ ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದಾರೆ. ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಅಥವಾ ಸ್ವಯಂ ನಿವೃತ್ತಿ ಪಡೆಯುವ ಆಯ್ಕೆಯನ್ನು ಹೊಂದಿದ್ದಾರೆ ಎಂದು ಸಿಜೆಐ ತಮ್ಮ ಕವರ್ ಪತ್ರದಲ್ಲಿ ಗಮನಸೆಳೆದಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ವಾಗ್ದಂಡನೆ ಶಿಫಾರಸಿಗೆಗೆ ಗುರಿಯಾಗಿರುವ ನ್ಯಾ ಯಶವಂತ ವರ್ಮಾ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಅವರ ವಿರುದ್ಧ ವಾಗ್ದಂಡಗೆ ಪ್ರಕ್ರಿಯೆಗಳು ಕಾನೂನಾತ್ಮಕವಾಗಿಯೇ ಶೀಘ್ರ ಆರಂಭವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
