ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವೆನೆಜುವೆಲಾ ಮೇಲಿನ ಅಮೆರಿಕಾ ದಾಳಿ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಸಿಪಿಐಎಂ ಪ್ರತಿಭಟನೆ

ವೆನೆಜುವೆಲಾ ಮೇಲಿನ ಅಮೆರಿಕಾ ದಾಳಿ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಸಿಪಿಐಎಂ ಪ್ರತಿಭಟನೆ

ಚನ್ನರಾಯಪಟ್ಟಣ: ವೆನಿಜುವೆಲಾದ ಅಧ್ಯಕ್ಷ ನಿಕೋಲಾಸ್ ಮುಡೊರೋ ಮತ್ತು ಅವರ ಪತ್ನಿಯನ್ನು ಏಕಾಏಕಿ ಅಪಹರಿಸುವ ಮೂಲಕ ಒಂದು ಸ್ವತಂತ್ರ ರಾಷ್ಟ್ರದ ಸಾರ್ವಭೌಮತೆಯ ಮೇಲೆ ದಾಳಿ ನಡೆಸಿರುವ ಅಮೆರಿಕ ಸರ್ಕಾರದ ಕೃತ್ಯವನ್ನು ಖಂಡಿಸಿ ಭಾತರ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಮತ್ತಿತರೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಈ ಅಕ್ರಮ ಹಾಗೂ ಏಕಪಕ್ಷೀಯ ಕ್ರಮಕ್ಕೆ ಹೊಣೆಗಾರರಾಗಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡೆ ಅಂತರರಾಷ್ಟ್ರೀಯ ಕಾನೂನು, ಯುಎನ್‌ ಘೋಷಿತ ರಾಷ್ಟ್ರಗಳ ಸ್ವಾಯತ್ತತೆ ಮತ್ತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಸಂಪೂರ್ಣ ವಿರೋಧವಾಗಿದೆ.ಒಂದು ದೇಶದ ರಾಜಕೀಯ ವ್ಯವಸ್ಥೆ ಹಾಗೂ ನಾಯಕತ್ವವನ್ನು ಮತ್ತೊಂದು ದೇಶ ತನ್ನ ಸೈನಿಕ ಶಕ್ತಿ, ಬಲವಂತ ಅಥವಾ ಅಪಹರಣದ ಮೂಲಕ ನಿರ್ಧರಿಸುವುದು ಸಾಮ್ರಾಜ್ಯವಾದಿ ಮನೋಭಾವದ ಅಪಾಯಕಾರಿ ರೂಪವಾಗಿದ್ದು, ಇದು ಜಾಗತಿಕ ಶಾಂತಿ ಮತ್ತು ವಿಶ್ವದ ಸ್ಥಿರತೆಗೆ ಗಂಭೀರ ಬೆದರಿಕೆಯಾಗಿದೆ.

ಜನರಿಂದ ಆಯ್ಕೆಯಾದ ರಾಷ್ಟ್ರಾಧ್ಯಕ್ಷನನ್ನು ಅಪಹರಿಸುವುದು ಅಂತರರಾಷ್ಟ್ರೀಯ ಅಪರಾಧವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ವಿಶ್ವ ಸಮುದಾಯ ಮೌನ ವಹಿಸುವುದು ಭವಿಷ್ಯದಲ್ಲಿ ಇನ್ನಷ್ಟು ದೌರ್ಜನ್ಯಗಳಿಗೆ ದಾರಿ ಮಾಡಿಕೊಡುತ್ತದೆ.ಅಮೆರಿಕ ಸರ್ಕಾರವು ತಕ್ಷಣವೇ ಈ ಕಾನೂನು ಬಾಹಿರ ಕ್ರಮವನ್ನು ನಿಲ್ಲಿಸಿ, ವೆನಿಜುವೆಲಾದ ಅಧ್ಯಕ್ಷ ನಿಕೋಲಾಸ್ ಮಧುರೋ ಅವರನ್ನು ಗೌರವಪೂರ್ವಕವಾಗಿ ಬಿಡುಗಡೆ ಮಾಡಿ ವೆನಿಜುವೆಲಾದ ಸಾರ್ವಭೌಮತೆಯನ್ನು ಗೌರವಿಸಬೇಕು ಹಾಗೂ ಈ ಘಟನೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೊರುವಂತೆ ‌ಪ್ರತಿಭಟನಾಕಾರರು ಒತ್ತಾಯಿಸಿದರು.ನ್ಯಾಯ, ಶಾಂತಿ ಮತ್ತು ರಾಷ್ಟ್ರಗಳ ಸ್ವಯಂನಿರ್ಣಯ ಹಕ್ಕಿನ ಪರವಾಗಿ ನಿಲ್ಲುವ ಎಲ್ಲಾ ಪ್ರಗತಿಪರ ಶಕ್ತಿಗಳು ಈ ದಾಳಿಯನ್ನು ಏಕಸ್ವರದಲ್ಲಿ ಖಂಡಿಸಬೇಕಿದೆ.ಈ ವಿಚಾರದಲ್ಲಿ ಭಾರತ ಸರ್ಕಾರ ದೃಢವಾದ ನಿಲುವನ್ನು ಕೈಗೊಂಡು ಸಾಮ್ರಾಜ್ಯಶಾಹಿ ನೀತಿಯನ್ನು ಬಲವಾಗಿ ಖಂಡಿಸಬೇಕು.

ಇದೇ ಸಂದರ್ಭದಲ್ಲಿ ಅಮೇರಿಕಾ ಆಮದು ಸುಂಕದ ಮೇಲೆ ಶೇಖಡ 500 ರಷ್ಟು ಹೆಚ್ಚಳ ಮಾಡಿರುವುದು ಭಾರತದಂತಹ ಕೃಷಿ ಉತ್ಪನ್ನಗಳ ಮೇಲೆ ದೊಡ್ಡಮಟ್ಟದ ದುಷ್ಪರಿಣಾಮ ಬೀರುತ್ತದೆ. ಕೂಡಲೇ ಇದನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಆರ್.ನವೀನ್ ಕುಮಾರ್, ಸಾಹಿತಿಗಳಾದ ಮೇಟಿಕೆರೆ ಹಿರಿಯಣ್ಣ, ರೈತ ಮುಖಂಡರಾದ ಎಚ್.ಎಸ್.ಮಂಜುನಾಥ್, ವಾಸುದೇವ್ ಕಲ್ಕೆರೆ, ತೇಜಸ್ ಗೌಡ, ಲೋಕೇಶ್, ದೊರೆ, ಮಂಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು