ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು

ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಹೇಳನಕಾರಿ ಬರಹ: ಪತ್ರಕರ್ತ ವಿಶ್ವೇಶ್ವರ ಮೇಲಿನ ಭಟ್ಕಳದ ಕ್ರಿಮಿನಲ್ ಪ್ರಕರಣ ದಾಖಲು ವಿಶ್ವವಾಣಿ ಎಂಬ ಕನ್ನಡ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೇಸ್ ಕಾನೂನು ವಿಭಾಗದ ಅಧ್ಯಕ್ಷ ವಕೀಲ ಮಂಜುನಾಥ ನಾಯಕ ಎಂಬುವವರು ವಿಶ್ವೇಶ್ವರ ಭಟ್ ವಿರುದ್ಧ ದೂರು ದಾಖಲಿಸಿದ್ದಾರೆ.

ವಿಶ್ವೇಶ್ವರ ಭಟ್‌ ಅಗಸ್ಟ್‌ 20 ರಂದು ಮಾಡಿದ್ದ ಫೇಸ್ಬುಕ್‌ ಪೋಸ್ಟ್‌ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್‌ ಮಾಡಿರುವ ಹಿನ್ನಲೆಯಲ್ಲಿ ಈ ಕೇಸ್‌ ದಾಖಲಾಗಿದೆ.

ಆರೋಪಿ ವಿಶ್ವೇಶ್ವರ ಭಟ್ Your clothes should be tight enough to show you are a teenage girl but loose enough to show you are a lady ಎಂಬ ಹಾಲಿವುಡ್‌ ನಟಿ ಮರ್ಲಿನ್‌ ಮೆನ್ರೋ ಮಾತುಗಳನ್ನು ಉಲ್ಲೇಖಿಸಿ “ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೋಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು, ಕೆಲ ದಿನಗಳ ಬಳಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ ? ಒಮ್ಮೆ ಯೋಚಿಸಿ” ಎಂದು ಬರೆದುಕೊಂಡಿದ್ದಾನೆ.

ಈತ ತನ್ನ ಬರಹದಲ್ಲಿ ಮಹಿಳೆಯರ ಬಗ್ಗೆ, ದೇಹದ ಬಗ್ಗೆ, ಉಡುಗೆಯ ಹಾಗೂ ಅವರ ಘನತೆಗೆ ಕುಂದಾಗುವಂತೆ ಅವಹೇಳನಕಾರಿಯಾಗಿ ಬರೆದಿದ್ದು ಇದರಿಂದ ಸಮಾಜಕ್ಕೆ ತಪ್ಪು ಸಂದೇಶವನ್ನು ಹರಡಿದ್ದು, ವಿಶ್ವೇಶ್ವರ ಭಟ್ಟ ಇವರ ಮೇಲೆ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಆಗ್ರಹಿಸಲಾಗಿದೆ.

ಐಪಿಸಿ ಸೆಕ್ಷನ್‌ 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ ನೀಡುವುದು), 509
(ಮಹಿಳೆಯರ ಘನತೆಯನ್ನು ಅವಮಾನಿಸುವುದು), 504
(ಶಾಂತಿ ಕದಡಲು ಉದ್ದೇಶಪೂರ್ವಕ ಅವಮಾನಿಸುವುದು) ಅಡಿಯಲ್ಲಿ ಕೇಸು ದಾಖಲಾಗಿದೆ.

ಕನ್ನಡ ದಿನಪತ್ರಿಕೆಯೊಂದರ ಪ್ರಧಾನ ಸಂಪಾದಕನಾದ ಈ ವ್ಯಕ್ತಿ ಈ ಹಿಂದೆಯೂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಪತ್ರಿಕೆಗಳಲ್ಲಿ ಬರೆದುಕೊಳ್ಳುವ ಅಭ್ಯಾಸವನ್ನು ಮಾಡಿಕೊಂಡಿದ್ದ ಮಾಡಿಕೊಂಡಿದ್ದು ಅನೇಕ ಬಾರಿ ಟೀಕೆಗೆ ಒಳಗಾಗಿದ್ದಾನೆ. ತನ್ನ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ನಾಯಕರನ್ನು ಆಹ್ವಾನಿಸಿದ ಸಂದರ್ಭದಲ್ಲಿ ಈತನ ವಿಕೃತಿಯ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು.

ವಿಷಯಗಳು: #karnataka #news #peepal #peepalmedia
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು