ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಡ್ಡ ಮತದಾನ ಹಿನ್ನೆಲೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ – ಚಿಂತನೆ

ಅಡ್ಡ ಮತದಾನ ಹಿನ್ನೆಲೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ – ಚಿಂತನೆ

ನವದೆಹಲಿ:  ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಪಕ್ಷದ ದೆಹಲಿ ವರಿಷ್ಠರು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಲೆದಂಡಕ್ಕೆ ನಿರ್ಧರಿಸಿದ್ದಾರೆ.ಅಶೋಕ್ ಸ್ಥಾನಕ್ಕೆ ಆರ್‌ಎಸ್‌ಎಸ್ ಮೂಲದ ವಿ.ಸುನೀಲ್‌ಕುಮಾರ್ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರವಿಂದ ಬೆಲ್ಲದ್ ಇಲ್ಲವೇ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ತರಲು ಚಿಂತನೆ ನಡೆಸಿದ್ದಾರೆ.ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ನೀಡಿದ ವರದಿ ಆಧಾರದ ಮೇಲೆ ಕರ್ನಾಟಕ ಬಿಜೆಪಿಯಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದಾರೆ.ವರದಿ ಆಧಾರದ ಮೇಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು, ಕೇಂದ್ರದಲ್ಲಿ ರಾಜ್ಯ ಪ್ರತಿನಿಧಿಸುವ ಸಚಿವರು, ಕೆಲವು ಹಿರಿಯ ಸಂಸದರೊಂದಿಗೆ ಬದಲಾವಣೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ.

ಮೈತ್ರಿ ಪಕ್ಷ ಜೆಡಿಎಸ್‌ನ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆಯೂ ಚರ್ಚಿಸಿರುವ ಉಭಯ ನಾಯಕರು, ಅಶೋಕ್ ಹಾಗೂ ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಖುದ್ದು ವಿವರಣೆ ಪಡೆದಿದ್ದಾರೆ.

ಸಂಪುಟ ಪುನರ್ ರಚನೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ನೇತೃತ್ವದ ಕೇಂದ್ರ ಸಂಪುಟವನ್ನು ಪುನರ್ ರಚನೆ ಮಾಡುತ್ತಿದ್ದು, ನಂತರ ಇಲ್ಲವೇ ಅದಕ್ಕೂ ಮೊದಲೇ ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಆಗಲಿದೆ.ಅಧಿಕಾರದಿಂದ ಕೆಳಗಿಳಿಯುವ ಅಶೋಕ್ ಮತ್ತು ವಿಜಯೇಂದ್ರ ಅವರನ್ನು ರಾಷ್ಟ್ರೀಯ ಸಂಘಟನೆಗೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಿರುವ ವರಿಷ್ಠರು, ಕೇಂದ್ರ ಸಂಪುಟ ಪುನರ್ ರಚನೆ ವೇಳೆ ಬಿ.ವೈ.ರಾಘವೇಂದ್ರ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆದಿದೆ.

ವಿಷಯಗಳು: #karnataka #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು