ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

7,142.64 ಕೋಟಿ ರೂ ರಾಜ್ಯಕ್ಕೆ ಬರ ಪರಿಹಾರ ನೀಡಿ – ಡಿ ಕೆ ಶಿವಕುಮಾರ್ ಮನವಿ

7,142.64 ಕೋಟಿ ರೂ ರಾಜ್ಯಕ್ಕೆ ಬರ ಪರಿಹಾರ ನೀಡಿ – ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯವು ತೀವ್ರ ಬರ (Drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದರು. ಕರ್ನಾಟಕ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಒಟ್ಟು 46,324.50 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, 3,701 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಿತ್ತು. ಈಗ ಪರಿಷ್ಕೃತ ಪಟ್ಟಿಯಲ್ಲಿ 3,437.34 ಕೋಟಿ ರೂ. ಹೆಚ್ಚುವರಿಯಾಗಿ ಸೇರಿಸಿ ಒಟ್ಟು 7,142.64 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ.

ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ

“ರಾಜ್ಯದಲ್ಲಿ 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಲಾಗಿದೆ” ಎಂದು ತಿಳಿಸಿದರು.

ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತಗೊಂಡಂತೆ: ಸಿಎಂ

“ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಬೇಕು” ಎಂದು ಮನವಿ ಮಾಡಿದರು.

“ನನ್ನ ಹಾಗೂ ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟು ತೊಂದರೆಗೊಳಗಾಗಿರುವುದನ್ನು ನೋಡಿಲ್ಲ. ಇದು ಅತ್ಯಂತ ಆಘಾತಕಾರಿ ಪರಿಸ್ಥಿತಿ. ಜನಪ್ರತಿನಿಧಿಗಳು ಹಾಗೂ ರೈತರ ಸಮಸ್ಯೆಗಳನ್ನು ಅರಿಯಲು ವಿಶೇಷ ಅಧಿವೇಶನ ಕರೆಯಲಾಗಿತ್ತು. 150 ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಿದರು” ಎಂದು ವಿವರಿಸಿದರು.

“ರಾಜ್ಯದ ಕೃಷ್ಣಾ ಜಲಾನಯನ ಪ್ರದೇಶ ಹೊರತು ಪಡಿಸಿ ಎಲ್ಲ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆ ಇದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆಯಾಗಿದೆ. ಅದಾಗ್ಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಸಿ ಆದೇಶ ನೀಡುತ್ತಿದೆ. ನಗರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ರೈತರಿಗೆ ರಾಜ್ಯ ಸರ್ಕಾರದ ಹಂತದಲ್ಲಿ 2500 ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ. ಆದರೆ ಕೇಂದ್ರದಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸುತ್ತಿದ್ದೇವೆ” ಎಂದರು.

ಮುನ್ನೆಚ್ಚರಿಕೆಯ ಕ್ರಮ

“ರಾಜ್ಯ ಸರ್ಕಾರದ ಎಲ್ಲ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ, ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಾನ್ಯ ಪ್ರಧಾನಮಂತ್ರಿಯವರು ಬರ ಪರಿಸ್ಥಿತಿಯ ಕುರಿತು ರಾಜ್ಯಕ್ಕೆ ಭೇಟಿ ನೀಡಿದಾಗ ಮುನ್ನೆಚ್ಚರಿಕೆ ನೀಡಿದ್ದರು. ಅದರಂತೆ ನಾನೂ ಸಚಿವ ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನು. ರೈತರಿಗೂ ಬಿತ್ತನೆ ಕುರಿತು ಮಾರ್ಗದರ್ಶನ ನೀಡಲಾಗಿತ್ತು” ಎಂದು ವಿವರಿಸಿದರು.

“ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಅಂತೆಯೇ ಹಾಲು ಉತ್ಪಾದಕರೂ ಕನಿಷ್ಠ 10 ರೂ. ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಈ ಸವಾಲಿನ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.

ವಸ್ತುನಿಷ್ಠ ವರದಿ ಸಲ್ಲಿಕೆ: ಕೇಂದ್ರ ತಂಡ ಮುಖ್ಯಸ್ಥರ ಭರವಸೆ

ಮುಖ್ಯಮಂತ್ರಿಗಳ ಮನವಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಅವರು ಮಾತನಾಡಿ, “ತಾವು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಿ ವಸ್ತುಸ್ಥಿತಿ ಅರಿಯುವುದರೊಂದಿಗೆ ದತ್ತಾಂಶಗಳನ್ನೂ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಪಡೆದುಕೊಂಡು ವಸ್ತುನಿಷ್ಠ ವರದಿ ಸಲ್ಲಿಸುವುದಾಗಿ” ತಿಳಿಸಿದರು.

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು