ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ ನಡೆಸಿದ ಡಿ.ಕೆ. ಸಹೋದರರು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ ನಡೆಸಿದ ಡಿ.ಕೆ. ಸಹೋದರರು

ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟ‌ರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು.

ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು.

ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು