ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಬಲ್‌ ರೈಡಿಂಗ್‌ ನಿರ್ಬಂಧ: ಆದೇಶ ವಾಪಾಸ್

P

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಡಬಲ್‌ ರೈಡಿಂಗ್‌ ನಿರ್ಬಂಧ: ಆದೇಶ ವಾಪಾಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ವಿಧಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್‌ ಶಶಿಕುಮಾರ್‌ ಹಿಂತೆಗೆದು ಕೊಂಡಿರುವುದಾಗಿ ಅಧಿಕೃತ ಸೂಚನೆ ನೀಡಿದ್ದಾರೆ. ಬೈಕ್‌ ಹಿಂಬದಿ ಪುರುಷ ಸವಾರನ ಸಂಚಾರ ನಿರ್ಬಂಧಿಸಿ ಎಡಿಜಿಪಿ ಅಲೋಕ್‌ ಕುಮಾರ್‌ ಹೊಸ ನಿಯಮವೊಂದನ್ನು ಕೆಲವು ಘಂಟೆಗಳ ಹಿಂದೆ ಸೂಚಿಸಿದ್ದರು.‌

ಇತ್ತೀಚೆಗೆ ನಡೆದ ಸರಣಿ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಹೇರಲಾಗಿದ್ದ ಸಂಜೆ 6 ಘಂಟೆಯಿಂದ ಬೆಳಿಗ್ಗೆ 9 ಘಂಟೆವರೆಗಿನ ನಿರ್ಬಂಧವನ್ನು ಸಡಿಲಿಸಲಾಗಿದೆ. ರಾತ್ರಿ ಒಂಭತ್ತು ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್‌ 5 ರಿಂದ ಸಂಜೆ 6 ಘಂಟೆಯವರೆಗೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಉಳಿದಂತೆ ಸೆ. 144 ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ತಿಳಿಸಿದ್ದಾರೆ.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version