ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಲ್ಲೆಯ ನಂತರ ಮೃತಪಟ್ಟ ದಲಿತ ವಿದ್ಯಾರ್ಥಿ, ದಲಿತ ಸಂಘಟನೆಗಳ ಆಕ್ರೋಶ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಉತ್ತರಗಳನ್ನು ಬರೆದಿದ್ದಕ್ಕಾಗಿ ಶಿಕ್ಷಕರಿಂದ ಥಳಿಸಲ್ಪಟ್ಟ 10 ನೇ ತರಗತಿಯ ದಲಿತ ವಿದ್ಯಾರ್ಥಿ ಇಂದು ಬೆಳಿಗ್ಗೆ ಲಕ್ನೋದಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

ಸೆ‌.7 ರಂದು ಉತ್ತರ ಪ್ರದೇಶದ ಔರೆಯಾ ಜಿಲ್ಲೆಯ ಆದರ್ಶ್ ಇಂಟರ್ ಕಾಲೇಜಿನಲ್ಲಿ 10 ನೇ ತರಗತಿ ವಿದ್ಯಾರ್ಥಿಯನ್ನು ಸಮಾಜ ವಿಜ್ಞಾನ ವಿಭಾಗದ ಶಿಕ್ಷಕಿ ಅಶ್ವಿನಿ ಸಿಂಗ್ ಮಾರಣಾಂತಿಕವಾಗಿ ಥಳಿಸಿದ ಪರಿಣಾಮ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಘಟನೆಯ ನಂತರ ಹಲ್ಲೆಗೊಳಗಾದ ವಿಧ್ಯಾರ್ಥಿಯ ಮನೆಗೆ ಸ್ಥಳೀಯ ದಲಿತ ನಾಯಕರು, ಭೀಮ್ ಆರ್ಮಿ ಸಂಘಟನೆ ಮುಖಂಡರು ಭೇಟಿ ನೀಡಿದ್ದರು. ಭಾರತದಲ್ಲಿ ಬಿಜೆಪಿ ಆಳ್ವಿಕೆಯ ನಂತರ ದಲಿತ ಸಮುದಾಯ ಇನ್ನಷ್ಟು ಹೀನಾಯ ಸ್ಥಿತಿಗೆ ತಲುಪಿದ್ದು, ದಲಿತರ ಮೇಲಿನ ಹಲ್ಲೆಯ ಪ್ರಕರಣಗಳು ಹೆಚ್ಚಾಗಿವೆ ಎಂದು ಮುಖಂಡರು ಆರೋಪಿಸಿದ್ದಾರೆ.

ವಿಧ್ಯಾರ್ಥಿಯ ಸಾವಿನ ನಂತರ ಬಿಎಸ್ಪಿ ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದು ಔರೈಯಾದಲ್ಲಿನ ಅಚ್ಚಲ್ಡಾದ ಆದರ್ಶ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದ 10 ನೇ ತರಗತಿಯ ದಲಿತ ವಿದ್ಯಾರ್ಥಿಯ ಸಾವು ತುಂಬಾ ಕಳವಳಕಾರಿಯಾಗಿದೆ, ಇದು ದಲಿತ ಸಮುದಾಯದ ವಿರುದ್ಧ ಹಿಂಸಾಚಾರ ಮತ್ತು ದೌರ್ಜನ್ಯಗಳು ಹೆಚ್ಚುತ್ತಿರುವುದನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಸೆಪ್ಟೆಂಬರ್ 7 ರಂದು ಮೃತರನ್ನು ಚಿಕಿತ್ಸೆಗಾಗಿ ಇಟಾವಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಸ್ಥಳಾಂತರಿಸಲಾಯಿತು. ದುರದೃಷ್ಟವಶಾತ್ ವಿಧ್ಯಾರ್ಥಿ ಬದುಕುಳಿಯಲಿಲ್ಲ. ಸಂತ್ರಸ್ತ ಕುಟುಂಬದವರು ನೀಡಿದ ದೂರಿನ ಮೇರೆಗೆ ಅಚ್ಚಲ್ಡಾ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದಾರೆ. ಆರೋಪಿ ಶಿಕ್ಷಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ವಿದ್ಯಾರ್ಥಿಯ ಸಾವಿನ ಮಾಹಿತಿಯಿಂದ ಇಂಟರ್ ಕಾಲೇಜನ್ನು ಮುಚ್ಚಲಾಗಿದೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು