ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು.
ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.

ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ.

ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.

ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು.

ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ ಎಂದರು.

ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ 56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಮಾತ್ರ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಿದ್ರೆ ಅದು ಅನ್ಯಾಯ ಆಗಲ್ವಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು ಅನ್ನಪೂರ್ಣ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ ಎಂದರು.

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ ಎಂದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು