ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

VB G RAM G ಯೋಜನೆ ವೇತನ ಪಾವತಿಯಲ್ಲಿ ವಿಳಂಬ, 400 ಅಧಿಕಾರಿಗಳಿಗೆ ನೋಟಿಸ್ – ಈಶ್ವರ ಖಂಡ್ರೆ

VB G RAM G ಯೋಜನೆ ವೇತನ ಪಾವತಿಯಲ್ಲಿ ವಿಳಂಬ, 400 ಅಧಿಕಾರಿಗಳಿಗೆ ನೋಟಿಸ್ – ಈಶ್ವರ ಖಂಡ್ರೆ

ಬೆಂಗಳೂರು: ‘ವಿಬಿ ಜಿ ರಾಮ್ ಜಿ’ (VB G RAM G) ಯೋಜನೆಯಡಿ ಕಾರ್ಮಿಕರಿಗೆ ವೇತನ ಪಾವತಿಸುವಲ್ಲಿ ಉಂಟಾದ ವಿಳಂಬ ಮತ್ತು ನಿರ್ಲಕ್ಷ್ಯಕ್ಕಾಗಿ 308 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), 74 ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು 12 ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ (show-cause notice) ಜಾರಿಗೊಳಿಸುವಂತೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಜನೆಯಡಿ ಕಾರ್ಮಿಕರಿಗೆ 15 ದಿನಗಳೊಳಗೆ ವೇತನ ಪಾವತಿಸಬೇಕೆಂಬ ಸ್ಪಷ್ಟ ನಿರ್ದೇಶನಗಳು ಮತ್ತು ಗಡುವನ್ನು ಪಾಲಿಸುವಲ್ಲಿ ವಿಫಲವಾದರೆ ಸಂಬಂಧಪಟ್ಟ ಪಿಡಿಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಗಳಿದ್ದರೂ, 12 ಜಿಲ್ಲೆಗಳ 311 ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಯಲ್ಲಿ ವಿಳಂಬವಾಗಿರುವುದಕ್ಕೆ ಸಚಿವ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಇಲಾಖೆಯ ಕಾರ್ಯದರ್ಶಿ ಮತ್ತು 12 ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಲಿಖಿತ ಸೂಚನೆಗಳನ್ನು ನೀಡಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆಯಾದ ನಂತರವೂ ಕೌಶಲ್ಯರಹಿತ ಕಾರ್ಮಿಕರಿಗೆ ವೇತನ ಪಾವತಿಸುವಲ್ಲಿ ಆಗಿರುವ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಅಧಿಕಾರಿಗಳ ಇಂತಹ ನಿರ್ಲಕ್ಷ್ಯವು ಜನರು ಈ ಯೋಜನೆಯಡಿ ಉದ್ಯೋಗ ಪಡೆಯುವುದರಿಂದ ವಿಮುಖರಾಗುವಂತೆ ಮಾಡುತ್ತಿದೆ. ಬರದಂತಹ ಪರಿಸ್ಥಿತಿಯಲ್ಲೂ ಜನರು ಕೆಲಸ ಹುಡುಕಿಕೊಂಡು ವಲಸೆ ಹೋಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. 12 ಜಿಲ್ಲೆಗಳ ವ್ಯಾಪ್ತಿಯ 311 ಗ್ರಾಮ ಪಂಚಾಯಿತಿಗಳಲ್ಲಿ ಈ ವಿಳಂಬ ವರದಿಯಾಗಿದೆ. ಬಾಗಲಕೋಟೆ (23), ಬೆಳಗಾವಿ (52), ಚಾಮರಾಜನಗರ (13), ಚಿಕ್ಕಮಗಳೂರು (14), ದಕ್ಷಿಣ ಕನ್ನಡ (15), ಹಾಸನ (47), ಕೊಡಗು (25), ಮಂಡ್ಯ (13), ಮೈಸೂರು (53), ಶಿವಮೊಗ್ಗ (14), ಉಡುಪಿ (23) ಮತ್ತು ವಿಜಯಪುರ (16) ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಪಟ್ಟ ಪಿಡಿಒಗಳು, ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯುತ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು 12 ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ, ಅವರಿಂದ ವಿವರಣೆಯನ್ನು ಪಡೆಯುವಂತೆ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಯಾವುದೇ ಗ್ರಾಮ ಪಂಚಾಯಿತಿಯಲ್ಲಿ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಅವರು ಇಲಾಖೆಯ ಕಾರ್ಯದರ್ಶಿ ಹಾಗೂ 12 ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಎಂಜಿಎನ್‌ಆರ್‌ಇಜಿಎ (MGNREGA) ಅಡಿಯಲ್ಲಿನ 90:10ರಷ್ಟಿದ್ದ ಅನುದಾನ ಹಂಚಿಕೆ ಅನುಪಾತವನ್ನು ‘ವಿಬಿಜಿ ರಾಮ್ ಜಿ’ (VBG Ram G) ಅಡಿಯಲ್ಲಿ 60:40ಕ್ಕೆ ಬದಲಾಯಿಸಿರುವುದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ಇದರ ಹೊರತಾಗಿಯೂ, ದುರ್ಬಲ ಗ್ರಾಮೀಣ ಕುಟುಂಬಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ರಾಜ್ಯವು ಈ ಯೋಜನೆಯನ್ನು ಜಾರಿಗೆ ತಂದಿದೆ. ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ವೇತನ ಪಾವತಿಯಲ್ಲಿನ ವಿಳಂಬವು ಯೋಜನೆಯ ಮೂಲ ಉದ್ದೇಶವನ್ನೇ ದುರ್ಬಲಗೊಳಿಸುತ್ತದೆ ಎಂದು ಖಂಡ್ರೆ ಎಚ್ಚರಿಸಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು