ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ವಜಾಕ್ಕೆ ಆಗ್ರಹಿಸಿ ಜ.8 ರಂದು ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ

ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ವಜಾಕ್ಕೆ ಆಗ್ರಹಿಸಿ ಜ.8 ರಂದು ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ

ಹಾಸನ : ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ಜನವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಹೋರಾಟ ಮಾಡಲಾಗುವುದು ಎಂದು ಡಿ.ಎಸ್.ಎಸ್. ಅಹಿಂದ ಚಳುವಳಿಯ ರಾಜ್ಯ ಜಂಠಿ ಕಾರ್ಯದರ್ಶಿ ಚೌಡಹಳ್ಳಿ ಜಗದೀಶ್ ಮತು ಜೈ ಭೀಮ್ ಬ್ರಿಗೇಡ್ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಅತ್ಯಂತ ಖಂಡನೀಯವಾದುದು. ಈ ಮಾತುಗಳು ಅಮಿತ್ ಶಾ ಅವರ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಹಾಗೂ ಅವರು ಹಿಂದೆಯೂ ಈಗಲೂ ಮುಂದೆಯೂ ಬಾಬಾಸಾಹೇಬರನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸಾಬೀತಾಗುತ್ತದೆ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಡಾ.ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ ಎಂದರು.

ಭಾರತದ ಸಂವಿಧಾನದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೆಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ. ಸಂವಿಧಾನದ ಕುರಿತು ಚರ್ಚೆಯ ಸಂದರ್ಭದಲ್ಲಿಯೇ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿತ್ತು ಎಂದು ಗುಡುಗಿದರು.

ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತವನ್ನು ಸಾರ್ವಭೌಮ, ಸಮಾಜವಾದಿ, ಮತಧರ್ಮ ನಿರಪೇಕ್ಷ, ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ದೇಶದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಆರಂಭದಿಂದಲೂ ತೀವ್ರ ಅಸಮಾಧಾನ ಮತ್ತು ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜಾತಿ ಹಿನ್ನೆಲೆಯನ್ನು ಎತ್ತಿ ತೋರಿಸುತ್ತಾ ಅಂಬೇಡ್ಕರ್ ಅವರು ಸಂವಿಧಾನ ಬರೆಯಲೇ ಇಲ್ಲ ಎನ್ನುವ ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಆಗ ಬಹಿರಂಗವಾಗಿಯೇ ಹೇಳಿತ್ತು. ಅಂತಹ ಸಂಘಪರಿವಾರ ಮತ್ತು ಬಿಜೆಪಿಯ ಅಮಿತ್ ಶಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ಅಪಮಾನಕರವಾದ ಮಾತುಗಳು ಅವರ ಮನುವಾದಿ ಪರಂಪರೆಯ ಮುಂದುವರಿಕೆಯ ಭಾಗವಾಗಿಯೇ ಬಂದಿವೆ. ಇದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಭಾರತದ ಸಂವಿಧಾನಕ್ಕೆ ಆಗಿರುವ ಅತ್ಯಂತ ಘೋರ ಅಪಮಾನವಾಗಿದೆ ಎಂದು ದೂರಿದರು.


ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ, ಮನುವಾದಿ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿ ಹಾಸನ ಜಿಲ್ಲಾ ದಲಿತ-ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ 2025 ಜನವರಿ 8 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ” ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಈ ಹೋರಾಟಕ್ಕೆ ದಲಿತ, ಜನಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಂವಿಧಾನ ಹಾಗೂ ಬಾಬಾಸಾಹೇಬರ ವಿಚಾರಗಳನ್ನು ಒಪ್ಪುವ ಸಮಾನ ಮನಸ್ಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಜೈ ಭೀಮ್ ಬ್ರಿಗೇಡ್ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್, ಚಂದ್ರಗುಪ್ತ ಮೌರ್ಯ ಸಂಘಟನೆ ಜಿಲ್ಲಾಧ್ಯಕ್ಷ ಹರೀಶ್ ಉಳುವಾರೆ, ಕೆ.ವೈ. ಜಗದೀಶ್, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪನಾಯಕ, ರಮೇಶ್, ದೇವರಾಜು ಹೊಂಗೆರೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #india #karnataka #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು