ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
ಲಿಂಕ್ ನಕಲಿಸಲಾಗಿದೆ ✓
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಆಯ್ಕೆಯನ್ನು ಮಹಾಯುತಿ ಒಕ್ಕೂಟದ ಕಡೆಯಿಂದ ಹೊರಬಿದ್ದಿದೆ. ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡುವುದಾಗಿ ತಿಳಿದು ಬಂದಿದೆ.
“ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ನಾಯಕನ ಆಯ್ಕೆಗೆ ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದ ನಂತರ ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಕಳೆದ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿ ಶಾ ಅವರನ್ನು ಭೇಟಿ ಮಾಡಿದ್ದರು.
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ