ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ, ಬೆಂವಿ.ವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಆಗ್ರಹ – ಚಂದ್ರು ಪೆರಿಯಾರ್

ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ, ಬೆಂವಿ.ವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಆಗ್ರಹ – ಚಂದ್ರು ಪೆರಿಯಾರ್


ಬೆಂಗಳೂರ : ವಿಶ್ವವಿದ್ಯಾನಿಲಯಗಳ ಕಾಯ್ದೆಯ ನಿಯಮಾನುಸಾರವಾಗಿ ಭಡ್ತಿಯಲ್ಲಿ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ವಂಚನೆಯಾಗುತ್ತಿದ್ದರೂ, ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಜಯಕರ ಎಸ್.ಎಂ ಜಾತಿ ತಾರತಮ್ಯವನ್ನು ನಿರಾಕರಿಸುತ್ತಿರುವುದು ಖಂಡನೀಯ. ಸರಕಾರ ಈ ಕೂಡಲೇ ಅವರನ್ನು ಕುಲಪತಿ ಜವಬ್ದಾರಿಯಿಂದ ಹಿಂತೆಗೆದುಕೊಳ್ಳಬೇಕು ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಆಗ್ರಹಿಸಿದ್ದಾರೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಸ್ಟರ್ ನಿಯಮಗಳ ವಿರುದ್ಧವಾಗಿ ದಲಿತ ಸಮುದಾಯದ ಪ್ರತಿಭಾವಂತರನ್ನು ಕೈಬಿಟ್ಟು ಹೊರಗಡೆಯಿಂದ 5 ಜನ ಬಲಾಢ್ಯ ಜಾತಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬೆಂವಿವಿ ಆರಂಭದಿಂದಲೂ ಒಬ್ಬೇ ಒಬ್ಬ ದಲಿತನೂ ಕುಲಪತಿಯಾಗಿಲ್ಲ. ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ ಎಂದು ಬೇಸರ ವ್ಯಕ್ತಪಡಿಸಿದರು.


ಕುಲಪತಿ ರಜೆಯಲ್ಲಿರುವಾಗ ಜವಬ್ದಾರಿಯನ್ನು ಹಿರಿಯ ಡೀನ್‌ಗೆ ಕೊಡಬೇಕೆನ್ನುವ ನಿಯಮ. ಆದರೆ, ಇಲ್ಲಿ ಇರುವ ಎಲ್ಲ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿದ್ದಾರೆನ್ನುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಿದ್ದಾರೆ. ಇದು ಕಾನೂನು ಬಾಹಿರವಷ್ಟೇ ಅಲ್ಲದೇ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀರಕಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ ಅನುಸರಿಸಿ ಕುಲಸಚಿವರಿಗೆ ನೀಡಿದ್ದಾರೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದು, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಜೀವನ ಭದ್ರತೆ ಇಲ್ಲದೆ ಕೆಲವರು ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ. ಇಷ್ಟೆಲ್ಲ ಆದಮೇಲೆ ಕುಲಪತಿ ಅವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜಿನಾಮೆ ನೀಡಬೇಕೆಂದು ಚಂದ್ರು ಪೆರಿಯಾರ್ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಎಚ್.ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತ ಮಹನೀಯರು ಕೆಲಸ ಮಾಡಿದ ವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ಜಾತಿಯತೆ, ಕೋಮುವಾದ ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ೬೭ ಪ್ರಾಧ್ಯಪಕರು ಜಾತಿ ತಾರತಮ್ಯ ಆಗುತ್ತಿದೆ ಎಂದು ಸಹಿ ಮಾಡಿದರು, ಕುಲಪತಿ ಅಸಡ್ಡೆ ತೋರುತ್ತಿರುವುದು ದರುಂತ. ವಿಶ್ವವಿದ್ಯಾನಿಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಜ್ಞಾನೇಶ್ವರ್ ಉಪಸ್ಥಿತರಿದ್ದರು.

>

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು