ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಯನಾಡ್ ದುರಂತ : ಸದನದ ದಾರಿ ತಪ್ಪಿಸಿದ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟೀಸ್

P
ವಯನಾಡ್ ದುರಂತ : ಸದನದ ದಾರಿ ತಪ್ಪಿಸಿದ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟೀಸ್

ವಯನಾಡ್ ಭೂಕುಸಿತದ ಕುರಿತು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಾಡಿದ ಭಾಷಣವು ಸದನದ ದಾರಿ ತಪ್ಪಿಸಿದ್ದಾಗಿದೆ ಎಂದು ಉಲ್ಲೇಖಿಸಿದ ಕಾಂಗ್ರೆಸ್, ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭೆಯಲ್ಲಿ ವಿಶೇಷ ಹಕ್ಕುಚ್ಯುತಿ ಮಂಡನೆ ಮಾಡಿದೆ.

ಈ ವಿಚಾರವಾಗಿ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಅಮಿತ್ ಶಾ ನೀಡಿರುವ ಹೇಳಿಕೆಯನ್ನು ವಿಪಕ್ಷಗಳು ವಿಸ್ಕೃತವಾಗಿ ಪರಿಶೀಲಿಸಿವೆ. ಅವರು ರಾಜ್ಯಸಭೆಯಲ್ಲಿ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಸದನವನ್ನು ಹಾದಿ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಳೆದ ಬುಧವಾರ ವಯನಾಡ್ ಭೂಕುಸಿತದ ಕುರಿತು ರಾಜ್ಯಸಭೆಯಲ್ಲಿ ನಡೆದ ಗಂಭೀರ ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಅಮಿತ್ ಶಾ ಜುಲೈ 23, 24, 25 ಮತ್ತು 26ರಂದು ತೀವ್ರ ಮಳೆಯಾಗುವ ಬಗ್ಗೆ ಕೇಂದ್ರ ಸರ್ಕಾರ ನೀಡಿದ್ದ ನಿರ್ದೇಶನವನ್ನು ಕೇರಳ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ನಮ್ಮ ನಿರ್ದೇಶನವನ್ನು ಪಾಲಿಸಿದ್ದರೆ ಒಂದಷ್ಟು ಜೀವಗಳನ್ನು ರಕ್ಷಿಸಬಹುದಿತ್ತು ಎಂದು ಅಮಿತ್ ಶಾ ಹೇಳಿದ್ದರು.

ಆದರೆ ಇದು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ’48 ಗಂಟೆಗಳಲ್ಲಿ 572 ಮಿಮೀ ದಾಖಲೆ ಮಳೆಯಾಗಿದೆ. ಆದರೆ, ನಮಗೆ ಎರಡು ದಿನಗಳಲ್ಲಿ 115 ಮಿಮೀ ನಿಂದ 204 ಮಿಮೀ ಮಳೆಯಾಗುವ ಎಚ್ಚರಿಕೆ ನೀಡಲಾಗಿತ್ತು. ಇದು ಆರೆಂಜ್ ಅಲರ್ಟ್ ಅಡಿಯಲ್ಲಿ ಬರುವ ಮಳೆಯ ಪ್ರಮಾಣವಾಗಿದೆ. ಜುಲೈ 30 ಬೆಳಗಿನ ಜಾವದವರೆಗೆ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಐಎಂಡಿ (India Meteorological Department) ಆರೆಂಜ್ ಅಲರ್ಟ್ ನೀಡಿತ್ತು ಎಂದಿದ್ದಾರೆ. ದುರಂತ ಸಂಭವಿಸಿದ ನಂತರವೇ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ.

ಈ ಸಂಬಂಧ ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಮತ್ತು ಹಿರಿಯ ಸಂಸದ ದಿಗ್ವಿಜಯ ಸಿಂಗ್ ಸಹಿ ಮಾಡಿರುವ ಹಕ್ಕುಚ್ಯುತಿ ಪತ್ರದಲ್ಲಿ, ಗೃಹಸಚಿವ ಅಮಿತ್ ಶಾ ಸದನದ ದಿಕ್ಕು ತಪ್ಪಿಸಿರುವುದು ಸ್ಪಷ್ಟ ಮತ್ತು ಸದನಕ್ಕೆ ಮಾಡುವ ಅವಮಾನವಾಗಿದೆ ಎಂದು ಹೇಳಲಾಗಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version