ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರೈತರಿಗೆ ಮೋಸವಾಗದಂತೆ ತ್ತನೆ ಆಲೂಗೆಡ್ಡೆ ವಿತರಣೆ ಮಾಡಿ – ಕಣಗಾಲ್ ಮೂರ್ತಿ

ರೈತರಿಗೆ ಮೋಸವಾಗದಂತೆ ತ್ತನೆ ಆಲೂಗೆಡ್ಡೆ ವಿತರಣೆ ಮಾಡಿ – ಕಣಗಾಲ್ ಮೂರ್ತಿ

ಹಾಸನ: ಬಿತ್ತನೆ ಆಲೂಗೆಡ್ಡೆಯನ್ನು ಇಲಾಖೆವತಿಯಿಂದ ರೈತರಿಗೆ ಮೋಸವಾಗದಂತೆ ದೃಡೀಕರಣ ಮಾಡಿ ವಿತರಣೆ ಮಾಡಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಇವರು ಆಲೂಗೆಡ್ಡೆ ಬಿತ್ತನೆ ಬೀಜದ ಮೇಳ ಮಾಡಲಿಲ್ಲ. ಈ ಬಗ್ಗೆ ಹೆಚ್ಚಿನ ವಿಚಾರ ಹೇಳುತ್ತಾರೆ ಕೇಳೋನಾ ಎಂದು ರೈತರುಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದು, ನಾವು ಬೀಜ ಎಂದು ಕೊಡ ಬರುವುದಿಲ್ಲ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಬೀಜದ ಮೇಳೆ ಎಂದು ಏಕೆ ಹೇಳಬೇಕು, ರೈತರ ದಿಕ್ಕು ಏಕೆ ತಪ್ಪಿಸಬೇಕು ಎಂದು ಪ್ರಶ್ನಿಸಿದರು. ಇದನ್ನು ಚರ್ಚೆ ಮಾಡಲೆಂದು ನಾವು ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಬಂದು ದಡದಡನೆ ವಾಪಸ್ ಹೋದರೆ ನಮಗೆ ಏನು ಅರ್ಥವೇ ಆಗಲಿಲ್ಲ . ಆಲೂಗೆಡ್ಡೆ ಮೇಳದಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಆಲೂಗೆಡ್ಡೆ ಬೆಳೆಗೆ ಉತ್ತೇಜನ ನೀಡುವಂತಹ ಯಾವುದೇ ತಾಂತ್ರಿಕ ಸಲಹೆ, ಸೂಚನೆಗಳು ಮೇಳದಲ್ಲಿ ದೊರಕಿಲ್ಲ. ಉಸ್ತುವಾರಿ ಸಚಿವರು ಕೆಲ ಹೊತ್ತು ಮಾತನಾಡುವುದಕ್ಕೂ ಸಮಯ ನೀಡದೇ ನೇರವಾಗಿ ಮಾತನಾಡಿ ಹೊರಟು ಹೋದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಹಾಗೂ ರೈತ ಮುಖಂಡರಿಗೆ ತಮ್ಮ ಸಮಸ್ಯೆ ಹೇಳಿಕೊಳ್ಳುವ ಅವಕಾಶವೇ ಸಿಗಲಿಲ್ಲ. ಇಂತಹ ಮೇಳಗಳಿಂದ ರೈತರಿಗೆ ಲಾಭವೇನು ಎಂದು ಪ್ರಶ್ನಿಸಿದರು. ಹಿಂದೆ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್‌ಗಳಲ್ಲಿ ಆಲೂಗೆಡ್ಡೆ ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಅಂಗಮಾರಿ ರೋಗ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಇಂದು ಆಲೂಗೆಡ್ಡೆ ಬೆಳೆಯುವ ಪ್ರದೇಶಗಳು ಬಹಳಷ್ಟು ಕುಂಠಿತಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಭರವಸೆ ನೀಡುವ ಬದಲು ಕೇವಲ ಮೇಳ ಆಯೋಜನೆ ಮಾಡಿ ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆದರೆ, ಮೊನ್ನೆ ನಡೆದ ಆಲೂಗೆಡ್ಡೆ ಮೇಳದ ನಂತರ ಕೆಲ ರೈತರಲ್ಲಿ ಮತ್ತೆ ಆಲೂಗೆಡ್ಡೆ ಬೆಳೆಯುವ ಆಸಕ್ತಿ ಮೂಡಿದೆ. ಈ ಉತ್ಸಾಹವನ್ನು ಉಳಿಸಬೇಕಾದರೆ ಮುಂದಿನ ದಿನಗಳಲ್ಲಿ ತೋಟಗಾರಿಕೆ ಇಲಾಖೆ ಮೂಲಕವೇ ದೃಢೀಕೃತ, ಗುಣಮಟ್ಟದ ಬಿತ್ತನೆ ಆಲೂಗೆಡ್ಡೆಗಳನ್ನು ರೈತರಿಗೆ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ವಸ್ತು ವಿತರಣೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು