ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನಗೆ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು ಗೊತ್ತಾ – ಡಿಕೆಶಿ

ನನಗೆ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು ಗೊತ್ತಾ – ಡಿಕೆಶಿ

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆಗಳ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್(Sting Operation) ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಬಳಿಗೂ ಕೆಲವರು ಜಿಎಸ್‌ಟಿ ಇತ್ಯಾದಿ ಬೇರೆ ಬೇರೆ ವಿಚಾರಗಳನ್ನು ಮಾತನಾಡಲು ಬಂದಿದ್ದರು. ನನ್ನಿಂದಲೇ ಈ ಸ್ಟಿಂಗ್ ಆಪರೇಷನ್ ಆರಂಭಿಸಲು ಯತ್ನಿಸಿದ್ದರು ಎಂದು ತಿಳಿಸಿದರು.

ನನಗೆ ಅವರ ಮೇಲೆ ಮುಂಚಿತವಾಗಿಯೇ ಅನುಮಾನ ಬಂದ ಹಿನ್ನೆಲೆಯಲ್ಲಿ, ಪೊಲೀಸರ ಮೂಲಕ ಸಂಪೂರ್ಣ ಮಾಹಿತಿ ಪಡೆದು ಎಲ್ಲಾ ದಾಖಲೆಗಳು ಹಾಗೂ ಫೋಟೋಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅಗತ್ಯಬಿದ್ದರೆ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆ. ಈ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ, ಯಾರು ಇದಕ್ಕೆ ಹಣಕಾಸು ಒದಗಿಸುತ್ತಿದ್ದಾರೆ ಇದರ ಪಿತಾಮಹ ಯಾರು ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ. ಕುಂಬಳಕಾಯಿ ಕಳ್ಳ ಅಂದರೆ ಕೆಲವರು ಹೆಗಲು ಮುಟ್ಟುಕೊಳ್ತಿದ್ದಾರೆ ಎಂದು ಹೇಳಿದರು.

ಈ ಹಿಂದೆ 2000ರ ಆಸುಪಾಸಿನಲ್ಲೂ ನನ್ನ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿದ್ದವು. ಸುಖಾಸುಮ್ಮನೆ ಟ್ರಾಪ್ ಮಾಡಲು ಜನರು ಬರುತ್ತಾರೆ, ಎಚ್ಚರಿಕೆಯಿಂದ ಇರಿ ಎಂದು ನಮ್ಮ ಅಧಿಕಾರಿಗಳಿಗೆ, ಸಚಿವರಿಗೆ ಸೂಚನೆ ನೀಡಿದ್ದೇನೆ.ಇದರಲ್ಲಿ ಕರ್ನಾಟಕದವರೇ ಇದ್ದಾರಾ ಅಥವಾ ಹೊರರಾಜ್ಯದವರಾ ಎಂಬ ವಿವರಗಳನ್ನು ಈಗಲೇ ಬಹಿರಂಗಪಡಿಸುವುದಿಲ್ಲ, ಕಾಲವೇ ಎಲ್ಲದಕ್ಕೂ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು