ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಸ್ ಅಪಘಾತದಲ್ಲಿ ಮೃತಪಟ್ಟ ವಿಧ್ಯಾರ್ಥಿನಿ ಸಾವಿನ ಸುತ್ತ ಅನುಮಾನ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಬಸ್ ಅಪಘಾತದಲ್ಲಿ ಮೃತಪಟ್ಟ ವಿಧ್ಯಾರ್ಥಿನಿ ಸಾವಿನ ಸುತ್ತ ಅನುಮಾನ

ಬೆಂಗಳೂರು: ಅಕ್ಟೋಬರ್ 10 ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಬಸ್ ಹತ್ತುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬರು ಕಾಲು ಜಾರಿ ಬಿದ್ದು ಅಪಘಾತವಾಗಿತ್ತು. ಆ ದುರ್ಘಟನೆಯಲ್ಲಿ ಬಿದ್ದ ವಿಧ್ಯಾರ್ಥಿನಿ ಇಂದು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ವಿಧ್ಯಾರ್ಥಿನಿಯ ದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ ವೈದ್ಯರು ಮೃತಪಟ್ಟ ಸುದ್ದಿಯನ್ನು ತಿಳಿಸಿದ್ದಾರೆ. ಆದರೆ ಮೃತದೇಹ ಗಮನಿಸಿದರೆ ಹಲವಷ್ಟು ಅನುಮಾನ ಸೃಷ್ಟಿಯಾಗಿದೆ. ವಿಧ್ಯಾರ್ಥಿನಿ ನೆನ್ನೆ ಅಥವಾ ಇವತ್ತು ಸಾವನ್ನಪ್ಪಿರುವ ರೀತಿ ಭಾಸವಾಗುತ್ತಿಲ್ಲ.

ಮೃತದೇಹ ಗಮನಿಸಿದರೆ ವಿಧ್ಯಾರ್ಥಿನಿ ಮೃತಪಟ್ಟು ಕೆಲವು ದಿನಗಳೇ ಕಳೆದಿದ್ದು, ಬೇಕಂತಲೇ ತಡವಾಗಿ ವಿಷಯ ತಿಳಿಸಿದಂತೆ ಅನುಮಾನ ವ್ಯಕ್ತವಾಗಿದೆ. ಹಬ್ಬದ ಸಮಯ ನೋಡಿ, ಪರಿಸ್ಥಿತಿ ಸುಧಾರಿಸಿದ ಮೇಲೆ ತಿಳಿಸಬೇಕು ಅಂತ ಡಾಕ್ಟರ್ ಗಳು ಸುಮ್ಮನಿದ್ದು ಈಗ ತಿಳಿಸಿರಬಹುದು ಎಂದೂ ಸಹ ವಿಧ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅನುಮಾನ ವ್ಯಕ್ತವಾಗಿದೆ.

ಇಂದು ಭಾನುವಾರ. ಯೂನಿವರ್ಸಿಟಿಯಲ್ಲಿನ ಅನೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಬ್ಬಕ್ಕೆಂದು ಊರಿಗೆ ಹೋಗಿರುತ್ತಾರೆ. ಇದರ ನಡುವೆ ಸುಧೀರ್ಘ ರಜೆ ಬೇರೆ ಇರುವುದರಿಂದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ಕಾರಣಕ್ಕೆ ಮೃತದೇಹವನ್ನು ತಡವಾಗಿ ಹಸ್ತಾಂತರಿಸಿರಬಹುದು ಎಂದೂ ಅಂದಾಜಿಸಲಾಗಿದೆ.

ಅಪಘಾತದ ದುರ್ಘಟನೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಸಾರ್ವಜನಿಕ ಬಸ್‌ಗಳ ಸಂಚಾರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಎರಡೂ ಗೇಟ್‌ಗಳನ್ನು ಬಂದ್ ಮಾಡಿದ್ದರು. ಈ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದರು.

ವಿಷಯಗಳು: #karnataka #news #peepal #peepalmedia
PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು