ಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಆರ್ಎಫ್ ಅಧಿಕಾರಿ – ಅರಣ್ಯಾಧಿಕಾರಿ ವಿಶ್ವನಾಥ್ ಲೋಕಾ ಬಲೆಗೆ
ಲಿಂಕ್ ನಕಲಿಸಲಾಗಿದೆ ✓
ಚಿಕ್ಕಬಳ್ಳಾಪುರ: ಕಲ್ಲು ಚಪ್ಪಡಿ ತೆಗೆಯಲು ಎನ್ಓಸಿ ಕೊಡಲು 43 ಸಾವಿರ ರೂ. ಲಂಚ (Bribe) ಪಡೆಯುತ್ತಿದ್ದ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗುಡಿಬಂಡೆ ಡಿಆರ್ಎಫ್ ಅಧಿಕಾರಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.
ಲಂಚ ಪಡೆಯುತ್ತಿದ್ದ ವೇಳೆಯೇ ಗುಡಿಬಂಡೆಯ ಉಪವಲಯ ಅರಣ್ಯಾಧಿಕಾರಿ (DRF) ವಿಶ್ವನಾಥ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕಲ್ಲು ಚಪ್ಪಡಿ ತೆಗೆಯುವುದಕ್ಕೆ ಸಂಬಂಧಿಸಿದಂತೆ ಎನ್ಓಸಿ (NOC) ನೀಡಲು ಅವರು ಮೂವರು ವ್ಯಕ್ತಿಗಳಿಂದ ಒಟ್ಟು 1.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಅಂತಿಮವಾಗಿ 43,000 ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಿವೀಸ್ ವಿರುದ್ಧ ಕನ್ನಡಿಗ ಕೆ.ಎಲ್ ರಾಹುಲ್ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆ
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ