ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿ: ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ‘ಸಾಮಾಜಿಕ ನ್ಯಾಯಕ್ಕಾಗಿ ST ಯೂತ್‌’ ಸಂಘಟನೆ ಆಕ್ರೋಶ

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿ: ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ‘ಸಾಮಾಜಿಕ ನ್ಯಾಯಕ್ಕಾಗಿ ST ಯೂತ್‌’ ಸಂಘಟನೆ ಆಕ್ರೋಶ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಮೇಲಿನ ಇಡಿ (ಅಮಾರೀಯ ತನಿಖಾ ನಿರ್ದೇಶನಾಲಯ) ದಾಳಿಯನ್ನು ಖಂಡಿಸಿ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ/ಆರ್‌ಎಸ್‌ಎಸ್‌ ನಡೆಗೆ ‘ಸಾಮಾಜಿಕ ನ್ಯಾಯಕ್ಕಾಗಿ ST ಯೂತ್‌’ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಕೈಗೊಂಬೆಯಂತೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ನಾಯಕ ಸಮುದಾಯದ ಯುವಜನರು, ಕೇಂದ್ರ ಸರ್ಕಾರ ಹಾಗೂ ಇಡಿ ತನಿಖಾ ಸಂಸ್ಥೆಗೆ ಪ್ರಮುಖ 4 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ:

  • ಆಧಾರವಿಲ್ಲದೆ ಬಂಧನ ಏಕೆ?: ಸಿಐಡಿ ತನಿಖೆಯಲ್ಲಿ ಯಾವುದೇ ಕನಿಷ್ಠ ಪುರಾವೆ ಇಲ್ಲದೆ ಹೊರಬಂದ ನಾಯಕ ಸಮುದಾಯದ ಮುಖಂಡ ಬಿ. ನಾಗೇಂದ್ರ ಅವರನ್ನು ಇಡಿ ಬಂಧಿಸಿದ್ದು ಯಾವ ಉದ್ದೇಶಕ್ಕೆ?
  • ಉದ್ದಿಮೆದಾರ ಸತೀಶ್‌ ಜಾರಕಿಹೊಳಿ ಅವರನ್ನೇ ಗುರಿ ಮಾಡಿದ್ದೇಕೆ?: ದಶಕಗಳಿಂದ ಯಶಸ್ವಿ ಉದ್ದಿಮೆದಾರ ಹಾಗೂ ಜನಪ್ರಿಯ ರಾಜಕಾರಣಿಯಾಗಿರುವ ಸತೀಶ್‌ ಜಾರಕಿಹೊಳಿ ಅವರ ಮೇಲೆಯೇ ಇಡಿ ದಾಳಿ ನಡೆಸಿರುವುದರ ಹಿಂದಿನ ರಹಸ್ಯವೇನು?
  • ಬಿಜೆಪಿ ನಾಯಕರ ಮೇಲೆ ದಾಳಿ ಇಲ್ಲವೇಕೆ?: ಕಳೆದ 12 ವರ್ಷಗಳಿಂದ ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಬಿಜೆಪಿ ನಾಯಕನ ವಿರುದ್ಧವೂ ಇಡಿ ದಾಳಿ ನಡೆಯದಿರಲು ಕಾರಣವೇನು?
  • ಶೋಷಿತ ಸಮುದಾಯಗಳೇ ಗುರಿಯೇ?: ಕೇಂದ್ರ ತನಿಖಾ ಸಂಸ್ಥೆಗಳಿಗೆ ಕೇವಲ ಶೋಷಿತ ಮತ್ತು ಹಿಂದುಳಿದ ಸಮುದಾಯದ ನಾಯಕರೇ ಏಕೆ ಸದಾ ಗುರಿಯಾಗುತ್ತಿದ್ದಾರೆ?

ನಾವು ಯಾವುದೇ ರೀತಿಯ ಕಾನೂನುಬದ್ಧ ತನಿಖೆಯನ್ನು ಸ್ವಾಗತಿಸುತ್ತೇವೆ. ಆದರೆ ತನಿಖಾ ಸಂಸ್ಥೆಗಳನ್ನು ವಿಪಕ್ಷಗಳ ಹಾಗೂ ಶೋಷಿತ ಸಮುದಾಯದ ನಾಯಕರನ್ನು ಹತ್ತಿಕ್ಕಲು ಬಳಸಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳಾದ ಮಾಡಾಳ್‌ ಶಿವಕುಮಾರ್‌, ಅನಿಲ್‌ ಕುಮಾರ್‌ ಚಿಕ್ಕದಾಳವಟ್ಟ ಸೇರಿದಂತೆ ವೆಂಕಟೇಶ್‌ ಎಚ್‌ ಆರ್‌, ನಾಗರಾಜ್‌ ಎಚ್‌, ಮದನ ಮೋಹನ ನಾಯಕ್‌ ಹಾಗೂ ನಾಯಕ ಸಮುದಾಯದ ಯುವ ಮುಖಂಡರು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ಒತ್ತಾಯಿಸಿದ್ದಾರೆ. ಮಾಧ್ಯಮಗಳು ಈ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು, ಶೋಷಿತ ಸಮುದಾಯಗಳ ಧ್ವನಿಯಾಗಬೇಕು ಎಂದು ಯುವ ಸಮುದಾಯ ಮನವಿ ಮಾಡಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು