ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಡಾ ಪ್ರಕರಣ : ನೂರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

PPeepal Media Desk

Peepal Media Desk • ದೇಶ, ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಮುಡಾ ಪ್ರಕರಣ : ನೂರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಮೈಸೂರಿನ ಮುಡಾ ಪ್ರಕರಣದಲ್ಲಿ ಈವರೆಗೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕೇಂದ್ರ ಜಾರಿ ನಿರ್ದೇಶನಾಲಯ ವರದಿ ನೀಡಿದೆ. ತನ್ನ X ಖಾತೆಯಲ್ಲಿ ಹಂಚಿಕೊಂಡಂತೆ, ಈವರೆಗೆ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಸದ್ಯ ಮುಡಾ ಕೇಸ್​ನ ತನಿಖೆ ಪ್ರಗತಿಯಲ್ಲಿದೆ. ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಪ್ರಕರಣ ಮಾತ್ರವಲ್ಲದೆ, ಮುಡಾ ಪ್ರಕರಣದಲ್ಲಿ ಹರಿದಾಡಿದ ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತಿಳಿಸಿದೆ.

ಈ ಹಿಂದೆ 300 ಕೋಟಿ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿದ್ದ ಇಡಿ, ಇದೀಗ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು