BREAKING NEWS : ಹಲವೆಡೆ ಬಿಲ್ಡರ್ ಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ
ಲಿಂಕ್ ನಕಲಿಸಲಾಗಿದೆ ✓
ಇಂದು ಬೆಳಿಗ್ಗೆಯೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಬಿಲ್ಡರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಮಲ್ಲೇಶ್ವರಂ, ಬನ್ನೇರುಘಟ್ಟ ರೋಡ್, ಹನುಮಂತನಗರ ಸೇರಿದಂತೆ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ಬಿಲ್ಡರ್ ಮತ್ತು ಡೆವಲಪರ್ಸ್ ಗಳ ಮನೆ ಮೇಲೆ ದಾಳಿ ನಡೆಸಿದೆ ಎಂಧು ತಿಳಿದು ಬಂದಿದೆ.
ಬೆಂಗಳೂರು ಹಾಗೂ ಮೈಸೂರಿನ 11 ಕಡೆ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಅಂತ ತಿಳಿದು ಬಂದಿದೆ.
ಬಿಲ್ಡರ್ ಗಳು ಸೈಟ್ ಕೊಡಿಸುವುದಾಗಿ ವಂಚಿಸಿ ಅವ್ಯವಹಾರ ಎಸಗಿದ ಆರೋಪದ ಹಿನ್ನಲೆಯಲ್ಲಿ ಈ ದಾಳಿಯನ್ನು ಇಡಿ ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾಗಿದೆ.
P
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ