ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡ ಹೋರಾಟಗಾರರ ಪರವಾಗಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಈಶ್ವರಪ್ಪ – ವಿಡಿಯೋ ನೋಡಿ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಕನ್ನಡ ಹೋರಾಟಗಾರರ ಪರವಾಗಿ ಹಿಂದಿ ಭಾಷೆಯಲ್ಲಿ ಮಾತನಾಡಿದ ಈಶ್ವರಪ್ಪ – ವಿಡಿಯೋ ನೋಡಿ

ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ ಕಡ್ಡಾಯ ಕನ್ನಡ ನಾಮಫಲಕದ ಹೋರಾಟದ ಬಗ್ಗೆ ಹಲವಷ್ಟು ರಾಜಕೀಯ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಶ್ಚರ್ಯ ಎಂದರೆ ಕಡ್ಡಾಯ ಕನ್ನಡ ನಾಮಫಲಕದ ಪರವಾಗಿ ಈ ಬಾರಿ ಬಿಜೆಪಿ ನಾಯಕರೂ ಸಹ ತಮ್ಮ ದನಿಗೂಡಿಸಿದ್ದಾರೆ.

ಈ ಬಗ್ಗೆ ಹಲವು ನಾಯಕರು ಕನ್ನಡ ಹೋರಾಟಗಾರರ ಪರವಾಗಿ ಮಾತನಾಡಿದ್ದು, ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರ ಮಾತುಗಳು ಈಗ ಸಾಮಾಜಿಕವಾಗಿ ಹಾಗೂ ಹೋರಾಟಗಾರರ ವಲಯದಲ್ಲಿ ಚರ್ಚೆಯ ವಸ್ತುವಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಕಡ್ಡಾಯ ಕನ್ನಡ ನಾಮಫಲಕ ಹೋರಾಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೆ.ಎಸ್.ಈಶ್ವರಪ್ಪ ಹಿಂದಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಕನ್ನಡ ಮೇ ಕೌನ್ ಕೌನ್ ಬ್ಯುಸಿನೆಸ್ ಕರ್ತಾ ಹೈ ಬೋರ್ಡ್ ಸಬಿ ಕನ್ನಡ್ ಮೆ ರೆಹ್ನಾ. ಉನ್ಕಾ ಡಿಮ್ಯಾಂಡ್ ತೋ ಕರೆಕ್ಟ್ ಹೈ, ಲೇಕಿನ್, ಉನ್ಕೋ ಡಿಮ್ಯಾಂಡ್ ಕ್ಯೋಂ ರಾಜ್ಯ ಸರ್ಕಾರ್ ಅಬಿ ತಕ್ ಇಂಟರೆಸ್ಟ್ ದಿಕಾತಾ ಹೈ..” ಎನ್ನುವ ಮೂಲಕ ಅರೆಬರೆ ಹಿಂದಿ, ಇಂಗ್ಲೀಷಿನಲ್ಲಿ ಮಾತನಾಡಿದ್ದಾರೆ.

ಮಾತನಾಡುತ್ತಿರುವುದೇ ಕನ್ನಡ ಭಾಷೆಯ ಪರವಾಗಿ ಎಂದಾಗ, ಕೆ.ಎಸ್.ಈಶ್ವರಪ್ಪ ಅದನ್ನು ಕನ್ನಡದಲ್ಲೇ ಪ್ರಸ್ತುತ ಪಡಿಸುವ ಬದಲು ಕಷ್ಟಪಟ್ಟು ಹಿಂದಿಯಲ್ಲಿ ಹೇಳಿ, ಟ್ರೋಲ್ ಸರಕಾಗಿದ್ದಾರೆ.

ಮುಂದುವರಿದು ಹಿಂದಿಯಲ್ಲೇ ತಮ್ಮ ಮಾತು ಮುಂದುವರೆಸಿದ ಕೆ.ಎಸ್.ಈಶ್ವರಪ್ಪ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರನ್ನು ಬಂಧಿಸಿರುವುದು ತಪ್ಪು. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮತ್ತು ಕನ್ನಡ ಪರ ಹೋರಾಟಗಾರರು ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಿ, ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆ ಬಗ್ಗೆ ಸೂಕ್ತ ನಿರ್ಣಯ ತಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಹಿಂದಿಯಲ್ಲಿ ಹೇಳಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version