ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಸ್ಲಿಂ ಸಮುದಾಯದ ಜಾಗೃತಿಗಾಗಿ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತರಕ್ಷಣಾ ವೇದಿಕೆ ಸ್ಥಾಪನೆ – ಸಮೀರ್ ಹಾಸನ್

ಮುಸ್ಲಿಂ ಸಮುದಾಯದ ಜಾಗೃತಿಗಾಗಿ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತರಕ್ಷಣಾ ವೇದಿಕೆ ಸ್ಥಾಪನೆ – ಸಮೀರ್ ಹಾಸನ್

ಹಾಸನ : ಮುಸಲ್ಮಾನ್ ಸಮುದಾಯಕ್ಕೆ ಸೇರಿದ ಆಸ್ತಿಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತರಕ್ಷಣಾ ವೇದಿಕೆ ಸ್ಥಾಪನೆಯಾಗಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಸಮೀರ್ ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಸೇರಿದ ಆಸ್ತಿಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಹಾಗೂ ಸಮುದಾಯಕ್ಕೆ ಸೇರಿರುವ ಆಸ್ತಿಪಾಸ್ತಿಗಳನ್ನು ಅಕ್ರಮಿಸಿಕೊಂಡಿರುವವರ ವಿರುದ್ಧ ಹೋರಾಟ ಮಾಡುವ ಸಲುವಾಗಿ ಈ ವೇದಿಕೆ ರಚನೆಯಾಗಿದೆ.

ಮುಸ್ಲಿಂ ಸಮುದಾಯದ ಧಾರ್ಮಿಕ ಸ್ಥಳಗಳಾದ ಮಸೀದಿ ಮದರಸ, ದರ್ಗಾ, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನ ಹಾಗೂ ಕೃಷಿ ಜಮೀನುಗಳ ಬಗ್ಗೆ ಮಾಹಿತಿ ಪಡೆದು ಇದಕ್ಕೆ ಸಂಬಂಧಿಸಿದ ಸಮಿತಿಗಳು ಪಾರದರ್ಶಕವಾಗಿ ಅವರಿಗೆ ಮನವರಿಕೆ ಮಾಡಿಕೊಟ್ಟು ಅಕ್ರಮ ನಡೆದಿದ್ದರೆ ಅದರ ವಿರುದ್ಧ ಹೋರಾಟ ಮಾಡಲು ಸಮಿತಿ ಮುಂದಾಗಿದೆ ಎಂದರು. ಮುಸ್ಲಿಂ ಸಮುದಾಯದ ಆಸ್ತಿಗಳು ಅತಿಕ್ರಮಣ ವಾಗಿದ್ದರೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಪ್ರತಿಕ್ರಮಣ ತೆರವು ಮಾಡುವ ಸಲುವಾಗಿ ಹೋರಾಟ ನಡೆಸಲು ಸಮಿತಿ ಸಜ್ಜಾಗಿದೆ. ನಮ್ಮ ಪೂರ್ವಜರು ಈ ಹಿಂದೆ ನೀಡಿದ್ದ ಆಸ್ತಿ ಕಟ್ಟಡ ಜಮೀನು ಇನ್ನಿತರ ಆಸ್ತಿಪಾಸ್ತಿಯನ್ನು ಗುತ್ತಿಗೆ ನೀಡಿ ಅವಧಿ ಮೀರಿದ ನಂತರವೂ ಅವರಿಂದ ವಾಪಸ್ ಪಡೆದಿದ್ದ ಜಾಗವನ್ನು ಸಹ ಹೋರಾಟಗಾರರ ಮುಖಾಂತರ ರಕ್ಷಣೆ ಮಾಡಲಾಗುವುದು. ದಾನಿಗಳು ನೀಡಿದ ಆಸ್ತಿಗಳಿಂದ ಬರುವ ಲಾಭದ ಹಣವನ್ನು ಸಮುದಾಯದ ಬಡ ಮಕ್ಕಳಿಗೆ ಅನಾಥ ಮಕ್ಕಳಿಗೆ ವಿರುದ್ಧರಿಗೆ ದೊರೆಯುವಂತೆ ಮಾಡಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಹೊತ್ತು ನೀಡುವ ಸಲುವಾಗಿ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಈ ಸಮಿತಿಯಲ್ಲಿ ಒಟ್ಟು 16 ಜನ ಸದಸ್ಯರಿದ್ದು ಹಾಸನ ಜಿಲ್ಲೆಯಲ್ಲಿ ಕೆಲಸ ಆರಂಭಿಸಿದ ಮುಂದಿನ ದಿನಗಳಲ್ಲಿ ಇದನ್ನು ರಾಜ್ಯ ಮಟ್ಟದಲ್ಲಿ ವಿಸ್ತರಿಸಿ ಮುಸಲ್ಮಾನರಿಗೆ ಅವರ ಆಸ್ತಿ ರಕ್ಷಣೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿತರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ. ಅಮಿತ್ ಅನ್ಸಾರಿ,  ಅಹಮದ್ ಅಲಿಖಾನ್ ಹಸೀಮ್ ಖಾನ್,  ಯಾಸಿನ್ ಪಾಶ,  ಇತರರು ಉಪಸ್ಥಿತರಿದ್ದರು.         

ವಿಷಯಗಳು: #karnataka #news #peepalmedia #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು