ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

5 ಕೋಟಿಗೂ ಹೆಚ್ಚು ಮಾದಕ ವಸ್ತುಗಳ ನಾಶಪಡಿಸಿದ ಅಬಕಾರಿ ಅಧಿಕಾರಿಗಳು

5 ಕೋಟಿಗೂ ಹೆಚ್ಚು ಮಾದಕ ವಸ್ತುಗಳ ನಾಶಪಡಿಸಿದ ಅಬಕಾರಿ ಅಧಿಕಾರಿಗಳು

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಅಬಕಾರಿ‌ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ (seized) 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು.

ದಾಬಸ್‌ಪೇಟೆಯ KWWA‌ನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ 156 ಪ್ರಕರಣಗಳಲ್ಲಿ ಸುಮಾರು 650 ಕೆಜಿಯಷ್ಟು ಗಾಂಜಾ, 2.296 ಕೆಜಿ ಗಾಂಜಾ ಮಿಶ್ರಿತ ಚಾಕೋಲೆಟ್, 70 ಗ್ರಾಂ MDMA, 570 ಗ್ರಾಂ ಹಶೀಶ್ ಆಯಿಲ್, ಗಾಂಜಾ ಗಿಡಗಳು ಸೇರಿದಂತೆ ಹಲವು ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ಮಾದಕ ವಸ್ತಗಳನ್ನು ನಾಶಪಡಿಸಲಾಗಿದೆ‌. ಈ ಸಂದರ್ಭದಲ್ಲಿ ಬಿಯುಡಿ 1 ಉಪ ಆಯುಕ್ತ ಮೌಸಸ್ ಸ್ಯಾಮುಯೆಲ್, ಬಿಯುಡಿ 2 ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್, ಬಿಯುಡಿ 3 ಉಪ ಆಯುಕ್ತ ಮುರುಳಿ, ಬಿಯುಡಿ 4 ಉಪ ಆಯುಕ್ತ ಶಿವಲಿಂಗಪ್ಪ ಬನಹಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಇಲಾಖೆಯ‌ ಸಿಬ್ಬಂದಿ ಉಪಸ್ಥಿತರಿದ್ದರು.

ನಾವು ಅಧಿಕಾರಕ್ಕೆ ಬಂದ ನಂತರ ಡ್ರಗ್ಸ್‌ಗೆ ಕಡಿವಾಣ ಹಾಕಬೇಕು ಎಂದು ನಮ್ಮ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಯುವಕರ ಆರೋಗ್ಯ, ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್‌ಗೆ ಕಡಿವಾಣ ಹಾಕ್ಬೇಕು. ಎನ್‌ಡಿಪಿಎಸ್ ಕಾಯ್ದೆ ಸಮರ್ಪಕವಾಗಿ, ಮತ್ತಷ್ಟು ಪರಿಣಾಮವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು