ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೈ ಕೊಟ್ಟ ಕೃಷಿ, ಮಳೆ ಕೊರತೆ ವಿಷ ಸೇವಿಸಿ ರೈತ ಆತ್ಮಹ*ತ್ಯೆ

ಕೈ ಕೊಟ್ಟ ಕೃಷಿ, ಮಳೆ ಕೊರತೆ ವಿಷ ಸೇವಿಸಿ ರೈತ ಆತ್ಮಹ*ತ್ಯೆ

ಹಾಸನ: ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ರೈತರೊಬ್ಬರು ಹೊಲದಲ್ಲಿಯೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು ಜಗದೀಶ್ (45) ಎಂದು ಗುರುತಿಸಲಾಗಿದೆ. ಜಗದೀಶ್ ಅವರು ಸ್ವಂತ ಜಮೀನಿನ ಜೊತೆಗೆ ಸುಮಾರು ಎಂಟು ಎಕರೆ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದರು. ಅವರು ತಮ್ಮ ಜಮೀನಿನಲ್ಲಿ ಶುಂಠಿ, ಆಲೂಗೆಡ್ಡೆ ಹಾಗೂ ಮೆಕ್ಕೆಜೋಳ ಬೆಳೆದಿದ್ದರು. ಕೃಷಿ ಚಟುವಟಿಕೆಗಳಿಗಾಗಿ ಜಗದೀಶ್ ಅವರು ಕಾವೇರಿ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ವಿವಿಧ ಸಂಘಗಳು ಹಾಗೂ ಕೈಸಾಲ ಸೇರಿದಂತೆ ಹತ್ತು ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.ಸಾಲ ಮರುಪಾವತಿ ಮಾಡುವಂತೆ ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ ಜಗದೀಶ್ ಅವರಿಗೆ ಎರಡ್ಮೂರು ಬಾರಿ ನೋಟೀಸ್ ನೀಡಲಾಗಿತ್ತು. ನೋಟೀಸ್‌ಗೆ ಹೆದರಿದ ಜಗದೀಶ್, ಪತ್ನಿಯ ಸ್ವಲ್ಪ ಒಡವೆಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಸಾಲದ ಹಣವನ್ನು ತೀರಿಸಿದ್ದರು.

ಆದರೆ ಬಳಿಕ ಮಳೆ ಕೊರತೆಯಿಂದ ಜಮೀನಿನಲ್ಲಿದ್ದ ಬೆಳೆಗಳು ಒಣಗತೊಡಗಿದ್ದವು. ಬೆಳೆಗಳನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಜಗದೀಶ್ ಅವರು ಪತ್ನಿಯ ಹೆಸರಿನಲ್ಲಿ ಉಳಿದಿದ್ದ ಒಡವೆಗಳನ್ನೂ ಅಡವಿಟ್ಟು ಮತ್ತೆ ಸಾಲ ಮಾಡಿಕೊಂಡಿದ್ದರು.ಸಾಲವಾಗಿ ಪಡೆದ ಹಣದಲ್ಲಿ ಎರಡು ಬೋರ್‌ವೆಲ್‌ಗಳನ್ನು ಕೊರೆಸಿದ್ದರು. ಆದರೆ ಎರಡೂ ಬೋರ್‌ವೆಲ್‌ಗಳಲ್ಲೂ ನೀರು ಸಿಗದೆ ಜಗದೀಶ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದರು.ಇದರ ನಡುವೆ ಮಳೆ ಇಲ್ಲದೆ ಶುಂಠಿ, ಮೆಕ್ಕೆಜೋಳ ಹಾಗೂ ಆಲೂಗೆಡ್ಡೆ ಬೆಳೆಗಳು ಸಂಪೂರ್ಣ ನಾಶವಾಗಿದ್ದವು. ಬೆಳೆ ನಷ್ಟ, ಹೆಚ್ಚಾದ ಸಾಲ ಹಾಗೂ ಆರ್ಥಿಕ ಸಂಕಷ್ಟದಿಂದ ಮನನೊಂದ ಜಗದೀಶ್ ಅವರು ಹೊಲದಲ್ಲಿಯೇ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.ವಿಷ ಸೇವಿಸಿದ್ದ ಜಗದೀಶ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಘಟನೆ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು