ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

P

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ರಾಜ್ಯ ವಿಧಾನಸಭಾ ಅಧಿವೇಶನ ಶುರುವಾಗುವ ಹಂತದಲ್ಲೇ ವಿವಿಧ ರೈತ ಸಂಘಟನೆಗಳ ಸಹಯೋಗದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಧರಣಿಗೆ ಕರೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯೇ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಸಾವಿರಾರು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಗೆ ಇಳಿದಿದ್ದಾರೆ.

‘ಬಿಜೆಪಿ ಸರ್ಕಾರ ಚುನಾವಣಾ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಯಾವ ಭರವಸೆಗಳನ್ನು ಈಡೇರಿಸಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸಾಲಮನ್ನಾ ಮಾಡುವುದಾಗಿ ಸರ್ಕಾರ ಘೋಷಿಸಿಕೊಂಡಿತ್ತು. ಆದರೆ ಈಗ ಸಾಲಮನ್ನಾ ಇರಲಿ, ರೈತರಿಂದಲೇ ಕಸಿದು ತಿನ್ನುವ ಮಟ್ಟಕ್ಕೆ ಸರ್ಕಾರ ಇಳಿದಿದೆ’ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು, ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಬಾರದು ಎಂದು ಆಗ್ರಹಿಸಿದ್ದಾರೆ.

ಜಾಥಾದ ನಂತರ ರೈತ ಸಂಘಟನೆ ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಗೆ ಮುಂದಾದಾಗ ಪೊಲೀಸರು ಅವರನ್ನು ಅರ್ಧದಲ್ಲೇ ತಡೆದಿದ್ದಾರೆ. ನಂತರ ಪ್ರತಿಭಟನೆ ತೀವ್ರವಾಗಬಹುದು ಎಂದು ಅರಿತ ಪೊಲೀಸರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಪ್ರಮುಖರನ್ನು ವಶಕ್ಕೆ ಪಡೆದಿದ್ದಾರೆ.

ವಿಷಯಗಳು: #kannada #karnataka #news #peepal #peepalmedia
P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version