ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರಕಾರದಿಂದ ಕಳಪೆ ಗುಣಮಟ್ಟದ ಜೋಳದ ಬೀಜ ವಿತರಣೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸರಕಾರದಿಂದ ಕಳಪೆ ಗುಣಮಟ್ಟದ ಜೋಳದ ಬೀಜ ವಿತರಣೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಹಾಸನ : ಸರ್ಕಾರವು ಕಂಪನಿಗಳ ಮೂಲಕ ರೈತರಿಗೆ ಕಳಪೆ ಗುಣಮಟ್ಟದ ಜೋಳದ ಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ ಧಹಿಸಿ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಮುತ್ತಿಗೆ ಹಾಕಿ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.


ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನಕಲಿ ಕಂಪನಿಗಳ ಪ್ರತಿಕೃತಿಯನ್ನು ಹೆಗಲು ಮೇಲೆ ಹೊತ್ತುಕೊಂಡು ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತ, ಬಿ.ಎಂ. ರಸ್ತೆ ಮೂಲಕ ಸಂತೇಪೇಟೆ ವೃತ್ತಕ್ಕೆ ಬಂದ ಪ್ರತಿಭಟನಾ ಮೆರವಣಿಗೆಯು ಮಾನವ ಸರಪಳಿ ನಿರ್ಮಿಸಿ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಇದೆ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ನಾಯಕರಾದ ಗಂಗಾಧರ್ ಮಾತನಾಡಿ, ಉತ್ತಮ ಮಳೆಯಾಗಿ ಜೂನ್ ತಿಂಗಳಲ್ಲೆ ಜಲಾಶಯಗಳು ಭರ್ತಿಯಾಗಿದೆ. ರಾಜ್ಯದಲ್ಲಿ ಉತ್ತಮ ಬಿತ್ತನೆಯಾಗಿದೆ. ಆದರೇ ಕೃಷಿ ಮತ್ತು ತೋಟಗಾರಿಕ ಇಲಾಖೆ ಬೀಜ ಸಂಬಂಧಿತ ಕಾಯಿದೆ ಪರಿಪಾಲನೆ ಮಾಡುವಲ್ಲಿ ಸೋತಿದೆ. ಅಧಿಕೃತವಾಗಿ ಸರ್ಕಾರದ ಬಿಡ್ಡಿಗೆ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಗಳ ಜೊತೆ ಕೃಷಿ ನಿರ್ದೇಶಕರು ಶಾಮಿಲಾಗಿ ರೈತರಿಗೆ ಕಳಪೆ ಬೀಜ ನೀಡಿರುವ ಮತ್ತು ಕಂಪನಿಯವರು ರೈತರಿಗೆ ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತ ವತಿಯಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು ಎಂದರು.

ಕಳಪೆ ಬೀಜವನ್ನು ಕೃಷಿ ಇಲಾಖೆಯವರ ಹೆಸರು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿರುವರ ವಿರುದ್ಧ ಮೊಕದ್ದಮೆ ದಾಖಲಿಸಿ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಯವರನ್ನು ಅಂಗಡಿ ಮುಖಾಂತರ ಮಾರುವುದನ್ನು ನಿರ್ಬಂಧಿಸಬೇಕು. ಬೆಳೆ ಸಮೀಕ್ಷೆಯನ್ನು ತಾಲ್ಲೂಕು ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಸಮೀಕ್ಷೆ ನಡೆಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಮಾಡಿಸಬೇಕು ಎಂದು ಒತ್ತಾಯಿಸಿದರು. ಬೆಳೆ ನಾಶವಾಗಿರುವ ರೈತರಿಗೆ ಕಂಪನಿಯವರಿಂದಲೆ ಕೃಷಿ ಇಲಾಖೆಯವರು ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರವನ್ನು ಕೊಡಿಸಕೊಡಬೇಕು ಹಾಗೂ ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆ ಬೀಜದ ಹೈಟೆಕ್ ಕಂಪನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ಅಧ್ಯಕ್ಷಿಯ ಮಂಡಳಿಯ ಸದಸ್ಯೆ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ತಿಪಟೂರು ಜಯಚಂದ್ರ ಶರ್ಮ, ಮೈಸೂರಿನ ಕಿರಣ್, ರೈತ ಸಂಘದ ಜಿಲ್ಲಾಧ್ಯಕ್ಷ ಮೂರ್ತಿ ಕಣಗಾಲ್, ಗ್ಯಾರಂಟಿ ರಾಮಣ್ಣ, ಮಂಜು ಬಿಟ್ಟಗೌಡನಹಳ್ಳಿ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮರ್ಕುಲಿ ಪ್ರಕಾಶ್, ಹಾಸನ ತಾಲೂಕು ಅಧ್ಯಕ್ಷ ಬಿಟ್ಟಗೌಡನಹಳ್ಳಿ ಮಂಜುನಾಥ್, ಪಾಲಾಕ್ಷ ಮಾರನಹಳ್ಳಿ, ಶಿವಕುಮಾರ್ ಹಳೇಬೀಡು, ಶೇಷಣ್ಣ, ಕಾಂತರಾಜು ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು