ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಡದಿ ಜಮೀನು ವಿಚಾರದಲ್ಲಿ ಸರ್ಕಾರದ ನಡೆ ಖಂಡಿಸಿ – ರೈತ ಜಾಥಾ

ಬಿಡದಿ ಜಮೀನು ವಿಚಾರದಲ್ಲಿ ಸರ್ಕಾರದ ನಡೆ ಖಂಡಿಸಿ – ರೈತ ಜಾಥಾ

ಹಾಸನ : ಬಿಡದಿ ಜಮೀನು ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ ಅವರ ಹೇಳಿಕೆಗಳನ್ನು ಖಂಡಿಸಿ, ಜೆಡಿಎಸ್ ವತಿಯಿಂದ ಜೂನ್ 21ರಂದು ರೈತ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಲಿಂಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಜಮೀನು ಪ್ರಕರಣವು ಕೇವಲ ಒಂದು ಪ್ರದೇಶದ ಸಮಸ್ಯೆಯಲ್ಲ, ರಾಜ್ಯದ ರೈತರ ಭೂ ಹಕ್ಕುಗಳು, ಸ್ಥಳೀಯರ ಹಿತಾಸಕ್ತಿ ಹಾಗೂ ಭೂ ಸಂರಕ್ಷಣೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ ಎಂದು ಹೇಳಿದರು. ಸರ್ಕಾರವು ರೈತರ ಅಭಿಪ್ರಾಯ ಮತ್ತು ಸ್ಥಳೀಯ ಜನರ ಭಾವನೆಗಳನ್ನು ಕಡೆಗಣಿಸಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಡದಿ ಪ್ರದೇಶದ ಭೂಮಿಯನ್ನು ಕೈಗಾರಿಕಾ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆಯಿದ್ದು, ರೈತರಿಗೆ ಅನ್ಯಾಯವಾಗುವ ಸಾಧ್ಯತೆ ಇದೆ. ಭೂಸ್ವಾಧೀನ, ಭೂ ಬಳಕೆ ಬದಲಾವಣೆ ಹಾಗೂ ಹೂಡಿಕೆದಾರರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಗಿಂತ ಖಾಸಗಿ ಮತ್ತು ಹೊರರಾಜ್ಯದ ಹೂಡಿಕೆದಾರರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ರೈತರ ಹಕ್ಕುಗಳ ರಕ್ಷಣೆಗೆ ಹಾಗೂ ಸರ್ಕಾರದ ಗಮನ ಸೆಳೆಯಲು ಜೆಡಿಎಸ್ ಹೋರಾಟದ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ ಎಂದು ಹೇಳಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೂನ್ 21ರಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿರುವ ರೈತ ಜಾಥಾ ವಿವಿಧ ಗ್ರಾಮಗಳ ಮೂಲಕ ಸಾಗಲಿದ್ದು, ಹೊಸೂರಿನಲ್ಲಿ ಸಮಾರೋಪಗೊಳ್ಳಲಿದೆ. ಜಾಥಾದಲ್ಲಿ ರೈತರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ರಸ್ತೆ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರಘು ಹೊಂಗೆರೆ, ದ್ಯಾವೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು