ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನೆಲಮಂಗಲ ಜಿಂದಾಲ್ ಬಳಿ ಭೀಕರ ಅಪಘಾತ: KSRTC ಬಸ್–ಕಾರ್ ಡಿಕ್ಕಿ, ಐವರು ಸಾವು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ನೆಲಮಂಗಲ ಜಿಂದಾಲ್ ಬಳಿ ಭೀಕರ ಅಪಘಾತ: KSRTC ಬಸ್–ಕಾರ್ ಡಿಕ್ಕಿ, ಐವರು ಸಾವು

ನೆಲಮಂಗಲ ಜಿಂದಾಲ್ ಸಮೀಪ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. KSRTC ಬಸ್ ಮತ್ತು ಇಂಡಿಕಾ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರಂತ ಸಂಭವಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ತುಮಕೂರು ಕಡೆಯಿಂದ ಬೆಂಗಳೂರುತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಜಿಗಿದು, ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ KSRTC ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಜಖಂಗೊಂಡಿದೆ.

ಕಾರು ಪ್ರಯಾಣಿಸುತ್ತಿದ್ದ ಐವರಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ. ಮೃತರಲ್ಲಿ ದೊಡ್ಡಬಳ್ಳಾಪುರ ಮೂಲದ ಹರ್ಷಿತ್ ಹಾಗೂ ನಿಖಿತ್ ಗುರುತಿಸಲ್ಪಟ್ಟಿದ್ದು, ಇನ್ನೂ ಮೂವರ ಗುರುತು ಪತ್ತೆಯಾಗಬೇಕಿದೆ.

ಮೃತ ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದನು. ಘಟನೆ ನಡೆದ ರಾತ್ರಿ 8.30ರ ವರೆಗೆ ಮನೆಯಲ್ಲಿ ಇದ್ದು, ಸ್ನೇಹಿತನನ್ನು ಭೇಟಿ ಮಾಡಿ ಬರುತ್ತೇನೆ ಎಂದು ಹೇಳಿ ಹೊರಟಿದ್ದನೆಂದು ಕುಟುಂಬದವರು ತಿಳಿಸಿದ್ದಾರೆ. ಆಸ್ಪತ್ರೆ ಮುಂಭಾಗ ಕುಟುಂಬದವರ ಆಕ್ರಂದನ ಮನಕಲಕುವಂತಿತ್ತು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದ ಮತ್ತೊಂದು ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ ಈ ದುರಂತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು